Newsics.com
ಶಿವಮೊಗ್ಗ: ಕೆ ಪಿ ಎಸ್ ಸಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.
ಕೆಲವು ಆರೋಪಿಗಳನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ರಾಜ್ಯ ಲೋಕಸೇವಾ ಆಯೋಗದ ಸಿಬ್ಬಂದಿ ಶಾಮೀಲಾಗಿದ್ದರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು. ಇದನ್ನು ಸಹಿಸಲು ಸಾಧ್ಯವಿಲ್ಲ ಎಂದು ಸಿಎಂ ಸ್ಪಷ್ಟಪಡಿಸಿದರು.
ಇದೇ ವೇಳೆ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ರಾಜ್ಯದ ವಿವಿಧೆಡೆ ಪರೀಕ್ಷಾರ್ಥಿಗಳು ಇಂದು ಪ್ರತಿಭಟನೆ ನಡೆಸಿದ್ದಾರೆ.