newsics.com
ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಕ್ಯಾಬಿನೆಟ್ ಸಚಿವರಾದ ಪ್ರಿಯಾಂಕ್ ಖರ್ಗೆ ಮತ್ತು ಎಂ.ಬಿ.ಪಾಟೀಲ್ ಅವರಿಗೆ ಹೆಚ್ಚುವರಿ ಜವಾಬ್ದಾರಿಗಳನ್ನು ಹಂಚಿಕೆ ಮಾಡಿದ್ದಾರೆ.
ಪ್ರಿಯಾಂಕ್ ಖರ್ಗೆ ಅವರಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಜೊತೆಗೆ ಹೆಚ್ಚುವರಿಯಾಗಿ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ (ಐಟಿ ಮತ್ತು ಬಿಟಿ) ಖಾತೆ ಹಂಚಿಕೆ ಮಾಡಲಾಗಿದೆ. ಎಂಬಿ ಪಾಟೀಲ್ ಅವರಿಗೆ ಈ ಹಿಂದೆ ಮಂಜೂರು ಮಾಡಿದ ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಜೊತೆಗೆ ಹೆಚ್ಚುವರಿಯಾಗಿ ಮೂಲಸೌಕರ್ಯ ಅಭಿವೃದ್ಧಿ ಖಾತೆ ನೀಡಲಾಗಿದೆ. ಈ ಎರಡೂ ಖಾತೆಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಇದ್ದವು.
ಕರ್ನಾಟಕದ ನೂತನ ಕಾಂಗ್ರೆಸ್ ಸರ್ಕಾರವು 33 ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಿದ ಕೆಲವೇ ದಿನಗಳಲ್ಲಿ, ಕ್ಯಾಬಿನೆಟ್ ಸಚಿವರಾದ ಪ್ರಿಯಾಂಕ್ ಖರ್ಗೆ ಮತ್ತು ಎಂ.ಬಿ.ಪಾಟೀಲ್ ಅವರಿಗೆ ಹೆಚ್ಚುವರಿ ಜವಾಬ್ದಾರಿಗಳನ್ನು ಹಂಚಿಕೆ ಮಾಡಿದ್ದಾರೆ. ಈ ಕುರಿತು ಸಚಿವ ಸಂಪುಟ ವ್ಯವಹಾರಗಳು, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಸಚಿವಾಲಯ ಹೊರಡಿಸಿದ ಆದೇಶದಲ್ಲಿ ಮಾಹಿತಿ ನೀಡಲಾಗಿದೆ.
ಲೋಕಾಯುಕ್ತ ಅಧಿಕಾರಿಗಳು ದಾಳಿ; ಜಿಂಕೆ ಕೊಂಬು ಸಮೇತ 4.75 ಕೋಟಿ ರೂ. ಆಸ್ತಿ ಪತ್ತೆ