ಉಡುಪಿ: ಪೇಜಾವರ ಶ್ರೀಗಳ ಆರೋಗ್ಯ ವಿಷಮಗೊಂಡ ಹಿನ್ನೆಲೆಯಲ್ಲಿ ಶನಿವಾರ ಭಾನುವಾರ ಉಡುಪಿಯಲ್ಲೇ ಉಳಿಯುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಶನಿವಾರ ಸಂಜೆ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ತೆರಳಿ ಪೇಜಾವರ ಶ್ರೀಗಳ ಆರೋಗ್ಯ ವಿಚಾರಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪೇಜಾವರ ಶ್ರೀಗಳ ಆರೋಗ್ಯದಲ್ಲಿ ಸುಧಾರಣೆ ಕಾಣುತ್ತಿಲ್ಲ. ಕ್ಷಣ ಕ್ಷಣಕ್ಕೂ ಅವರ ಆರೋಗ್ಯ ಕ್ಷೀಣಿಸುತ್ತಿದೆ. ವೈದ್ಯರ ಪ್ರಯತ್ನ ಮುಂದುವರೆದಿದೆ ಎಂದರು.
ಪೇಜಾವರ ಶ್ರೀಗಳು ಸಮಾಜದಲ್ಲಿ ಅತ್ಯುತ್ತಮ ಕಾರ್ಯಗಳನ್ನು ಮಾಡಿ ಜನಪ್ರಿಯರಾಗಿದ್ದಾರೆ. ಅವರು ಇನ್ನೂ ಹೆಚ್ಚು ಕಾಲ ಇರಲೆಂದು ನಾನು ಪ್ರಾರ್ಥಿಸುತ್ತೇನೆ. ಎಲ್ಲರೂ ಅವರ ಉಳಿವಿಗೆ ಪ್ರಾರ್ಥಿಸುವಂತೆ ಮನವಿ ಮಾಡಿದರು.