newsics.com
ಅಮರಾವತಿ(ಆಂಧ್ರಪ್ರದೇಶ): ಕರ್ನಾಟಕ ಸಿಎಂ ಯಡಿಯೂರಪ್ಪ ಅವರು ಆಂಧ್ರಪ್ರದೇಶ ರಾಜ್ಯಪಾಲರಾಗಲಿದ್ದಾರಾ?
ಇಂತಹದೊಂದು ಚರ್ಚೆ ಆಂಧ್ರಪ್ರದೇಶದಲ್ಲಿ ಜೋರಾಗಿದೆ. ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆ ಸೇರಿದಂತೆ ರಾಜ್ಯ ಸರ್ಕಾರದ ಕಾರ್ಯವೈಖರಿ ಬಗ್ಗೆ ಆಡಳಿತಾರೂಢ ಬಿಜೆಪಿಯಲ್ಲಿ ಅಸಮಾಧಾನದ ಹೊಗೆ ಎದ್ದಿರುವ ಬೆನ್ನಲ್ಲೇ ಆಂಧ್ರಪ್ರದೇಶದ ಹಲವು ಪತ್ರಿಕೆಗಳು ಇಂತಹ ವರದಿಗಳನ್ನು ಪ್ರಕಟಿಸಿವೆ. ಕಳೆದ ಎರಡು ದಿನಗಳಿಂದ ತೆಲುಗು ಮಾಧ್ಯಮಗಳಲ್ಲಿ ಈ ವಿಚಾರ ಸಾಕಷ್ಟು ಚರ್ಚೆಯಾಗುತ್ತಿದೆ.
ಹೀಗಾಗಿ ಕರ್ನಾಟಕ ಸಿಎಂ ಬಿ. ಎಸ್. ಯಡಿಯೂರಪ್ಪ ನೆರೆ ರಾಜ್ಯ ಆಂಧ್ರಪ್ರದೇಶದ ರಾಜ್ಯಪಾಲರಾಗಲಿದ್ದಾರೆಂಬ ವಿಚಾರ ಭಾರೀ ಸದ್ದು ಮಾಡಲಾರಂಭಿಸಿದೆ. ರಾಜ್ಯ ಬಿಜೆಪಿಯಲ್ಲಿ ಭಿನ್ನಮತ ಕಂಡು ಬಂದಿರುವ ಸಂದರ್ಭದಲ್ಲಿ ಇಂತಹುದ್ದೊಂದು ಚರ್ಚೆ ನಡೆಯುತ್ತಿರುವುದು ಭಾರೀ ಮಹತ್ವ ಪಡೆದಿದೆ.
ಆಂಧ್ರಪ್ರದೇಶದ ಹಾಲಿ ರಾಜ್ಯಪಾಲ ಬಿಶ್ವಭೂಷಣ ಅವರ ಅವಧಿ ಜುಲೈ 23ಕ್ಕೆ ಅಂತ್ಯಗೊಳ್ಳಲಿರುವ ಹಿನ್ನೆಲೆಯಲ್ಲಿ ಬಿ. ಎಸ್. ಯಡಿಯೂರಪ್ಪ ಹೆಸರು ಮುನ್ನೆಲೆಗೆ ಬಂದಿದ್ದು, ಸಾಕಷ್ಟು ಚರ್ಚೆಯಾಗುತ್ತಿದೆ.
ರಾಹುಲ್ ಗಾಂಧಿ 51ನೇ ಹುಟ್ಟುಹಬ್ಬ: ಕಾಂಗ್ರೆಸ್ ಕಾರ್ಯಕರ್ತರಿಂದ ಸೇವಾ ದಿವಸ್
ಒಂದೇ ದಿನ 60,753 ಜನರಿಗೆ ಕೊರೋನಾ ಸೋಂಕು, 97,743 ಮಂದಿ ಗುಣಮುಖ, 1,647 ಜನ ಸಾವು