ಬೆಂಗಳೂರು: ಕಾಲೇಜುಗಳ ಕ್ಯಾಂಪಸ್ ಒಳಗಾಗಲೀ, ಹೊರಗಾಗಲಿ ಪ್ರತಿಭಟನೆ ನಡೆಸಬೇಕಾದರೆ ಪೂರ್ವಾನುಮತಿ ಪಡೆಯಲೇಬೇಕು. ಅನುಮತಿ ಪಡೆಯದೆ ಪ್ರತಿಭಟನೆ ನಡೆಸಿದರೆ ಕಾನೂನು ಕ್ರಮ ನಿಶ್ಚಿತ ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಎಚ್ಚರಿಸಿದ್ದಾರೆ.
ಮೈಸೂರು ವಿಶ್ವವಿದ್ಯಾಲಯದ ಆವರಣದಲ್ಲಿ ವಿದ್ಯಾರ್ಥಿಗಳು ಫ್ರೀ ಕಾಶ್ಮೀರ್ ಫಲಕ ಪ್ರದರ್ಶನ ಮಾಡಿದ ಘಟನೆಗೆ ಪ್ರತಿಕ್ರಿಯಿಸಿದ ಅವರು, ಕಾಲೇಜಿನಲ್ಲಿ ಕಾರ್ಯಕ್ರಮ ಆಯೋಜಿಸಿದ್ದ ನಾಲ್ಕಾರು ಸಂಘಟನೆಗಳು ಹಾಗೂ ಒಬ್ಬ ವ್ಯಕ್ತಿಯ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ. ಜ್ಯೋತಿ ನಿವಾಸ್ ಕಾಲೇಜಿನಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ರಜೆ ಘೋಷಿಸಿರಬಹುದು. ಆ ಬಗ್ಗೆ ವಿಚಾರಿಸುತ್ತೇನೆ ಎಂದರು.
ಕಾಲೇಜುಗಳಲ್ಲಿ ಪ್ರತಿಭಟನೆಗೆ ಪೂರ್ವಾನುಮತಿ ಕಡ್ಡಾಯ: ಡಾ. ಅಶ್ವತ್ಥ ನಾರಾಯಣ
Follow Us