Monday, August 8, 2022

ಡಿಕ್ಕಿಯಾಗಿ ಹೊತ್ತಿ ಉರಿದ 2 ಬೈಕ್; ಮೂವರ ಸಾವು

Follow Us

newsics.com
ವಿಜಯಪುರ: ಎರಡು ಬೈಕ್ ಗಳು ಡಿಕ್ಕಿಯಾಗಿ ಮೂವರು ಮೃತಪಟ್ಟ ಘಟನೆ ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ತಾಲೂಕಿನ ದಿಂಡವಾರ ಗ್ರಾಮದ ಬಳಿ ನಡೆದಿದೆ.
ಅಪಘಾತದ ನಂತರ ಎರಡು ಬೈಕ್ ಗಳು ಹೊತ್ತಿ ಉರಿದಿವೆ. ಕಲಬುರ್ಗಿ ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಬೈಕ್ ಸವಾರರು ಕೊಪ್ಪಳದ ಅಂಜನಾದ್ರಿ ಬೆಟ್ಟಕ್ಕೆ ತೆರಳುವಾಗ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಸ್ಥಳದಲ್ಲಿ ಮೃತಪಟ್ಟಿದ್ದು, ಮತ್ತೋರ್ವ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.
ಮೃತರಲ್ಲಿ ಓರ್ವನ ಗುರುತು ಪತ್ತೆಯಾಗಿದ್ದು, ಕುಮಾರ (22) ಎಂದು ತಿಳಿದುಬಂದಿದೆ. ಇನ್ನಿಬ್ಬರ ಗುರುತು ಪತ್ತೆಯಾಗಿಲ್ಲ. ಬಸವನಬಾಗೇವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಪ್ರವೀಣ್ ಹತ್ಯೆ ಪ್ರಕರಣ: ಮತ್ತೆ ಇಬ್ಬರು ಆರೋಪಿಗಳು ಪೊಲೀಸ್ ವಶಕ್ಕೆ

newsics.com ಮಂಗಳೂರು: ಬೆಳ್ಳಾರೆಯ ಪ್ರವೀಣ್ ಹತ್ಯೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಆರೋಪಿಗಳನ್ನು  ಅಬೀದ್ ಮತ್ತು ನೌಫಾಲ್ ಎಂದು ಗುರುತಿಸಲಾಗಿದೆ. ಇಬ್ಬರು...

ಏಳು ವರ್ಷದ ಮಗುವಿನಲ್ಲಿ ಮಂಕಿ ಫಾಕ್ಸ್ ರೋಗ ಲಕ್ಷಣ ಪತ್ತೆ

newsics.com ತಿರುವನಂತಪುರಂ: ಕೇರಳದಲ್ಲಿ ಏಳು ವರ್ಷದ ಮಗುವಿನಲ್ಲಿ  ಮಂಕಿ ಫಾಕ್ಸ್ ರೋಗದ ಲಕ್ಷಣ ಕಂಡು ಬಂದಿದೆ. ಇದೀಗ ಸ್ಯಾಂಪಲ್ ನ್ನು  ಉನ್ನತ ಪರೀಕ್ಷೆಗಾಗಿ ಕಳುಹಿಸಿಕೊಡಲಾಗಿದೆ. ಮಗುವನ್ನು ಪೆರಿಯಾರಂ ಮೆಡಿಕಲ್ ಕಾಲೇಜಿನಲ್ಲಿ  ದಾಖಲಿಸಲಾಗಿದ್ದು,  ಚಿಕಿತ್ಸೆ ಮುಂದುವರಿದಿದೆ ಬ್ರಿಟನ್ ನಿಂದ...

ಜಮ್ಮು ಕಾಶ್ಮೀರದ ಹಲವೆಡೆ ಎನ್ ಐ ಎ ದಾಳಿ

newsics.com ಶ್ರೀನಗರ: ಭಯೋತ್ಪಾದಕ ಸಂಘಟನೆಗಳಿಗೆ ಕೆಲವು ವ್ಯಕ್ತಿಗಳು  ಹಣಕಾಸಿನ ನೆರವು ನೀಡುತ್ತಿದ್ದಾರೆ ಎಂಬ ಶಂಕೆ ಹಿನ್ನೆಲೆಯಲ್ಲಿ ಜಮ್ಮು ಕಾಶ್ಮೀರದ ಹಲವೆಡೆ ಎನ್ ಐ ಎ ದಾಳಿ ನಡೆಸಿದೆ. ಸ್ಥಳೀಯರು ಈ ಕೃತ್ಯದಲ್ಲಿ ತೊಡಗಿದ್ದಾರೆ ಎಂದು ಶಂಕಿಸಲಾಗಿದೆ. ಈ...
- Advertisement -
error: Content is protected !!