Sunday, July 3, 2022

ಬರುತ್ತಿದ್ದಾನೆ ಕೊರೋನಾ ನಿವಾರಕ ಗಣಪ!

Follow Us

ಬೆಂಗಳೂರು: ಹಬ್ಬಗಳು ಕಾಲಕ್ಕನುಗುಣವಾಗಿ ಬದಲಾಗುತ್ತಲೇ ಇರುತ್ತವೆ. ಕೊರೋನಾದಿಂದ ಈಗ ಎಲ್ಲವೂ ಬದಲು ಬದಲು. ಕೊರೋನಾ ಮಹಾಮಾರಿಯ ಅಟ್ಟಹಾಸದಿಂದ ಎಲ್ಲರಿಗೂ ಆತಂಕ. ಈ ಆತಂಕದ ಛಾಯೆ ಗಣೇಶನ ಹಬ್ಬದ ಮೇಲೂ ಬೀರಿದೆ.
ರಾಜ್ಯದಲ್ಲಿ ಕೊರೋನಾ ಸೋಂಕು ತೀವ್ರವಾಗಿ ಹರಡುತ್ತಿರುವುದರಿಂದ ಅದ್ಧೂರಿ ಗಣೇಶೋತ್ಸವಕ್ಕೆ ಬ್ರೇಕ್ ಬಿದ್ದಿದೆ. ಬೆಂಗಳೂರಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಗಳ ಪ್ರತಿಷ್ಠಾಪನೆಯನ್ನು ಈಗಾಗಲೇ ಬಿಬಿಎಂಪಿ ಬ್ಯಾನ್ ಮಾಡಿದೆ.
ಸರಳ ಆಚರಣೆಗೆ ಗಣೇಶೋತ್ಸವ ಸೀಮಿತವಾಗಿರುವುದರಿಂದ ಗಣೇಶ ಮೂರ್ತಿ ತಯಾರಕರು ಆತಂಕಕ್ಕೆ ಒಳಗಾಗಿದ್ದಾರೆ. ಪ್ರತಿವರ್ಷ ಗಣೇಶ ಮೂರ್ತಿ ಮಾರಾಟದಿಂದ ತಮ್ಮ ಹೊಟ್ಟೆ ತುಂಬಿಸಿಕೊಳ್ಳುತ್ತಿದ್ದ ಕಲಾವಿದರ ಕೈಗೆ ಕೆಲಸವಿಲ್ಲದಂತಾಗಿದೆ. ಒಂದೆಡೆ ಕೊರೋನಾ, ಇನ್ನೊಂದೆಡೆ ನಷ್ಟದ ಆತಂಕ. ಈ ಆತಂಕದ ನಡುವೆಯೂ ಕಲಾವಿದರ ಕೈಯಲ್ಲಿ ಕೊರೋನಾ ನಿವಾರಕ ಗಣೇಶ ಮೂರ್ತಿಗಳು ಜೀವ ತಳೆದಿವೆ.
ಮನೆಗಳಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಲು ಅವಕಾಶ ನೀಡಿರುವುದನ್ನೇ ಸದುಪಯೋಗಪಡಿಸಿಕೊಂಡಿರುವ ಕಲಾವಿದರು ಇದೀಗ ಕೊರೊನಾ ನಿವಾರಕ ಗಣೇಶ ಮೂರ್ತಿಗಳನ್ನು ತಯಾರಿಸಿ ಗಮನ ಸೆಳೆಯುತ್ತಿದ್ದಾರೆ. ಬೃಹತ್ ಗಣೇಶ ಮೂರ್ತಿಗಳ ವ್ಯಾಪಾರ ಮಾಡಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಕಲಾವಿದರು ತರಹೇವಾರಿ ಗಣೇಶ ಮೂರ್ತಿಗಳನ್ನು ಕಲಾವಿದರು ತಯಾರಿಸಿದ್ದಾರೆ. ಈಗಾಗಲೇ ಕೊರೊನಾ ನಿವಾರಕ ಗಣೇಶ ಮೂರ್ತಿಗಳು ಅಂತಿಮ ರೂಪ ಪಡೆಯುತ್ತಿದ್ದು, ವ್ಯಾಪಾರಕ್ಕೆ ಸಿದ್ಧಗೊಳ್ಳಲಿವೆ.

ಮತ್ತಷ್ಟು ಸುದ್ದಿಗಳು

vertical

Latest News

ಕಲುಷಿತ ನೀರು ಸೇವನೆ; 40 ಕ್ಕೂ ಹೆಚ್ಚು ಜನ ಅಸ್ವಸ್ಥ

newsics.com ರಾಯಚೂರು; ಕಲುಷಿತ ನೀರು ಸೇವನೆ ಮಾಡಿ 40 ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡ ಘಟನೆ ರಾಯಚೂರಿನಲ್ಲಿ ನಡೆದಿದೆ. ಅನೇಕರು ವಾಂತಿ ಭೇದಿಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಲ್ಕಂದಿನ್ನಿಯ ಸರ್ಕಾರಿ...

ಅನಾರೋಗ್ಯ ನೆಪವೊಡ್ಡಿ ಏರ್ ಇಂಡಿಯಾ ಸಂದರ್ಶನಕ್ಕೆ ಹಾಜರಾದ ಇಂಡಿಗೋ ಸಿಬ್ಬಂದಿ, ವಿಮಾನ ಸೇವೆ ವ್ಯತ್ಯಯ

newsics.com ನವದೆಹಲಿ: ಏರ್ ಇಂಡಿಗೋ ಸಿಬ್ಬಂದಿ ಅನಾರೋಗ್ಯದ ನೆಪವೊಡ್ಡಿ ಶನಿವಾರ ಏರ್ ಇಂಡಿಯಾ‌ ಸಂದರ್ಶನಕ್ಕೆ ತೆರಳಿದ್ದರಿಂದ ಇಂಡಿಗೋ ಸೇವೆಯಲ್ಲಿ‌ ವ್ಯತ್ಯಯ ಉಂಟಾಗಿತ್ತು. ವಿಮಾನಯಾನ ವ್ಯತ್ಯಯ ಉಂಟಾಗಿದ್ದಕ್ಕೆ ಇಂಡಿಗೋ ಬಳಿ ಕಾರಣ ಕೇಳಲಾಗಿದೆ ಎಂದು ನಾಗರಿಕ ವಿಮಾನಯಾನ...

ಬೆಂಗಳೂರಿನಲ್ಲಿ 746 ಮಂದಿ ಸೇರಿ ರಾಜ್ಯದಲ್ಲಿ 826 ಜನಕ್ಕೆ ಕೊರೋನಾ ಸೋಂಕು

newsics.com ಬೆಂಗಳೂರು ; ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಇಂದು ಒಟ್ಟು 826 ಕೊರೊನಾ ಪ್ರಕರಣ ವರದಿಯಾಗಿದೆ.ಸಕ್ರಿಯ ಪ್ರಕರಣಗಳ ಸಂಖ್ಯೆ 6,666ಕ್ಕೆ ಏರಿಕೆ ಕಂಡಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,72,285ಕ್ಕೆ ಏರಿಕೆಯಾಗಿದೆ. ಇಂದು ಯಾವುದೇ ಸಾವು...
- Advertisement -
error: Content is protected !!