newsics.com
ಬೆಂಗಳೂರು: ಸ್ಯಾಂಡಲ್ವುಡ್ ಡ್ರಗ್ಸ್ ಜಾಲ ಪ್ರಕರಣದಲ್ಲಿ ಜೈಲುವಾಸ ಅನುಭವಿಸುತ್ತಿರುವ ನಟಿ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗರ್ಲಾನಿಗೆ ಗುರುವಾರವೂ (ಸೆ.24) ಬಿಡುಗಡೆ ಭಾಗ್ಯ ಸಿಗಲಿಲ್ಲ.
ಇವರ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ನಾಳೆಗೆ ಪ್ರಕರಣವನ್ನು ಮುಂದೂಡಿದೆ. ಇದರಿಂದ ಇಂದು ರಾತ್ರಿ ಕೂಡ ಅವರು ಪರಪ್ಪನ ಆಗ್ರಹಾರ ಜೈಲಿನಲ್ಲಿಯೇ ಕಳೆಯಬೇಕಿದೆ.
ಇಬ್ಬರೂ ನಟಿಯರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಈಗಾಗಲೇ ಮಾದಕ ವಸ್ತು ಪ್ರಕರಣದಲ್ಲಿ ಸಿಸಿಬಿಯಿಂದ ಬಂಧನಕ್ಕೆ ಒಳಗಾಗಿರುವ ನಟಿಯರನ್ನು ಜಾರಿ ನಿರ್ದೇಶನಾಲಯ ಕೂಡ ವಿಚಾರಣೆಗೆ ಒಳಪಡಿಸಲಿದೆ. ಈ ಸಂಬಂಧ ಇಂದು ಇಡಿ, ಎನ್ಡಿಪಿಎಸ್ ವಿಶೇಷ ಕೋರ್ಟ್ ಮುಂದೆ ಮನವಿ ಸಲ್ಲಿಸಿದೆ. ರಾಗಿಣಿ, ಸಂಜನಾ, ವೈಭವ್ ಜೈನ್ ಸೇರಿ ಐವರನ್ನು ಪರಪ್ಪನ ಅಗ್ರಹಾರ ಜೈಲಿನಲ್ಲೇ ವಿಚಾರಣೆ ನಡೆಸಲು ಅನುಮತಿ ನೀಡುವಂತೆ ಕೋರಿಕೊಂಡಿದೆ.
ಇಂದು (ಸೆ.24) ಎನ್ಡಿಪಿಎಸ್ ನ್ಯಾಯಾಲಯದಲ್ಲಿ ಮತ್ತೊಂದು ಹೊಸ ಅರ್ಜಿ ದಾಖಲಾಗಿದೆ. ಇಡಿ ಸಲ್ಲಿಸಿರುವ ಈ ಅರ್ಜಿಯಲ್ಲಿ ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರು ಏಳು ಜನರ ವಿಚಾರಣೆ ನಡೆಸಲು ಅವಕಾಶ ನೀಡಬೇಕು ಎಂದು ಜಾರಿ ನಿರ್ದೇಶನಾಯಲ ಮನವಿ ಮಾಡಿದೆ.
ಕಳೆದ ಬಾರಿ ವಿಚಾರಣೆ ವೇಳೆ ಸಿಸಿಬಿ ಪರ ವಕೀಲರು ರಾಗಿಣಿಗೆ ಜಾಮೀನು ನೀಡದಂತೆ ಕೋರ್ಟ್ಗೆ ಲಿಖಿತ ಆಕ್ಷೇಪಣೆ ಸಲ್ಲಿಸಿದ್ದರು. ರಾಗಿಣಿ ಪರ ವಕೀಲರು ಜಾಮೀನು ನೀಡುವಂತೆ ಕೋರ್ಟ್ನಲ್ಲಿ ವಾದ ಮಂಡಿಸಿದ್ದರು. ಇಂದು ಸಿಸಿಬಿ ಪರ ವಕೀಲರು ಆಕ್ಷೇಪಣೆ ಮೇಲೆ ರಾಗಿಣಿಗೆ ಜಾಮೀನು ನೀಡದಂತೆ ಕೋರ್ಟ್ನಲ್ಲಿ ವಾದ ಮಂಡಿಸಿದ್ದಾರೆ.
ಮುಂದುವರಿದ ಜೈಲುವಾಸ; ರಾಗಿಣಿ, ಸಂಜನಾಗೆ ಮತ್ತೊಂದು ಸಂಕಷ್ಟ
Follow Us