Saturday, April 17, 2021

ಮಾ.8ರವರೆಗೆ ರಾಜ್ಯದಲ್ಲಿ ಒಣಹವೆ ಮುಂದುವರಿಕೆ

newsics.com

ಬೆಂಗಳೂರು: ರಾಜ್ಯದಲ್ಲಿ ಇನ್ನೂ ಮಾ. 8 ವರೆಗೆ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 34 ರಿಂದ 36 ಡಿಗ್ರಿ ಸೆಲ್ಸಿಯಸ್ ವರದಿಯಾಗಿದೆ.
ಉತ್ತರ ಒಳನಾಡಿನಲ್ಲಿಯೂ ಉಷ್ಣಾಂಶ ಏರಿಕೆಯಾಗಿದ್ದು ಕಲಬುರಗಿಯಲ್ಲಿ 38 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಕೊಪ್ಪಳದಲ್ಲಿ 35.5, ರಾಯಚೂರಿನಲ್ಲಿ 36, ಗದಗದಲ್ಲಿ 35, ಬೆಳಗಾವಿಯಲ್ಲಿ 34.4, ಬೆಂಗಳೂರಿನಲ್ಲಿ 32 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.
ಬೆಂಗಳೂರಿನಲ್ಲಿ ಮುಂದಿನ ಎರಡು ದಿನ ಗರಿಷ್ಠ ಹಾಗೂ ಕನಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಬೆಂಗಳೂರಿನಲ್ಲಿ 11, 404 ಕೊರೋನಾ ಸೋಂಕು, ರಾಜ್ಯದಲ್ಲಿ 17489 ಪ್ರಕರಣ, 80 ಜನರ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರಿಸುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ  ರಾಜ್ಯದಲ್ಲಿ ಹೊಸದಾಗಿ  17,489  ಮಂದಿಗೆ ಸೋಂಕು ತಗುಲಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ...

ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿ ಹೊರಟ ಯುವತಿಗೆ ದಂಡ

newsics.com ಲಂಡನ್: ಜನರು ಲಾಕ್ ಡೌನ್ ವೇಳೆ ಮನೆಯಲ್ಲಿ ಇರಬೇಕು ಎಂದು ಪೊಲೀಸರು ಸೂಚಿಸುತ್ತಾರೆ. ಆದರೆ ಲಂಡನ್ ನಲ್ಲಿ ಯುವತಿಯೊಬ್ಬಳು ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿಕೊಂಡು ಹೋಗಿದ್ದಳು. ಈ ಸಾಹಸಕ್ಕೆ ಹೋದ ಯುವತಿ...

41 ಅಕ್ರಮ ವಲಸಿಗರ ಜಲ ಸಮಾಧಿ

newsics.com ಟ್ಯುನಿಷಿಯಾ: ಇಟಲಿಗೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದ್ದ 41 ವಲಸಿಗರು ಸಮುದ್ರದಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಟ್ಯುನಿಷಿಯಾ ಸಮುದ್ರ ತೀರದಲ್ಲಿ ಈ  ದುರಂತ ಸಂಭವಿಸಿದೆ. ಈ ವಲಸಿಗರಿದ್ದ ಹಡಗು ಅಪಘಾತಕ್ಕೀಡಾದ ಪರಿಣಾಮ ವಲಸೆ ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದಾರೆ....
- Advertisement -
error: Content is protected !!