Tuesday, July 5, 2022

ಗರಿಷ್ಟ ಅಂಕಕ್ಕಿಂತ ಹೆಚ್ಚು ಮಾರ್ಕ್ಸ್ ನೀಡಿ ವಿವಾದಕ್ಕೀಡಾದ ವಿಟಿಯು

Follow Us

newsics.com

ಬೆಂಗಳೂರು: ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ಮೂರನೇ ಸೆಮಿಸ್ಟರ್‌ನ ಹಲವು ವಿದ್ಯಾರ್ಥಿಗಳಿಗೆ ಗರಿಷ್ಠ ಅಂಕಗಳಿಗಿಂತ ಹೆಚ್ಚಿನ ಅಂಕಗಳನ್ನು ನೀಡಿ ವಿವಾದಕ್ಕೆ ಒಳಗಾಗಿದೆ.

ಆಗಿರುವ ಲೋಪ ಗಮನಕ್ಕೆ ಬಂದಾಕ್ಷಣ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ್ದು, ಮೊದಲು ಪ್ರಕಟಿಸಲಾಗಿದ್ದ ಫಲಿತಾಂಶದಲ್ಲಿ ಉತ್ತಮ ಅಂಕ ಗಳಿಸಿದ್ದ ಹಲವರು ಕಡಿಮೆ ಅಂಕ ಗಳಿಸಿದ್ದರೆ, ಪಾಸಾಗಿದ್ದವರು ಅನುತ್ತೀರ್ಣರಾಗಿದ್ದಾರೆ.

100 ಅಂಕದ ಪರೀಕ್ಷೆಗೆ 106 ಅಂಕಗಳನ್ನು ನೀಡಲಾಗಿದ್ದು, ಲೋಪ ಸರಿಪಡಿಸಿ ಫಲಿತಾಂಶ ಪ್ರಕಟಿಸಿದಾಗ ಏಕಾಏಕಿ ವಿದ್ಯಾರ್ಥಿಗಳ ಅಂಕಗಳು ಕಡಿಮೆಯಾಗಿವೆ. ಮೊದಲಿನ ಫಲಿತಾಂಶದಲ್ಲಿ ಪಾಸಾಗಿದ್ದ ಕೆಲವು ವಿದ್ಯಾರ್ಥಿಗಳು ಎರಡನೇ ಬಾರಿಯ ಫಲಿತಾಂಶದಲ್ಲಿ ಅನುತ್ತೀರ್ಣರಾಗಿದ್ದಾರೆ.

ಇದರಿಂದ ಗೊಂದಲಕ್ಕೊಳಗಾದ ವಿದ್ಯಾರ್ಥಿಗಳು ವಿವಿ ಅಧಿಕಾರಿಗಳು ಮತ್ತು ಸಿಬ್ಬಂದಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಲೋಪ ಸರಿಪಡಿಸದಿದ್ದರೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದ್ದಾರೆ.

ಭಾರತೀಯ ಸಂವಿಧಾನ, ಪ್ರೊಫೆಷನಲ್ ಎಥಿಕ್ಸ್ ಮತ್ತು ಸೈಬರ್ ಲಾ ವಿಷಯದಲ್ಲಿ ಗರಿಷ್ಠ ಅಂಕಗಳಿಗಿಂತಲೂ ಹೆಚ್ಚಿನ ಅಂಕಗಳನ್ನು ನೀಡಲಾಗಿದೆ. 60 ಅಂಕಗಳಿಗೆ ಲಿಖಿತ ಪರೀಕ್ಷೆ, 40 ಅಂಕಗಳಿಗೆ ಆಂತರಿಕ ಮೌಲ್ಯಮಾಪನ ಇರುತ್ತದೆ. 100 ಅಂಕಗಳಿಗೆ ಫಲಿತಾಂಶ ನೀಡುವ ಬದಲು ಹಲವು ವಿದ್ಯಾರ್ಥಿಗಳಿಗೆ 103, 106 ಅಂಕಗಳನ್ನು ನೀಡಲಾಗಿತ್ತು.

ದೇಶದಲ್ಲಿ 17,336 ಜನರಿಗೆ ಕೊರೋನಾ ಸೋಂಕು, 13 ಮಂದಿ ಸಾವು

ಅಗ್ನಿಪಥ್ ಪ್ರತಿಭಟನೆ: ವಾಟ್ಸ್​ಆ್ಯಪ್​ ಗ್ರೂಪ್ ಮೂಲಕ ವಿದ್ಯಾರ್ಥಿಗಳಿಗೆ ಪ್ರಚೋದನೆ

ಮತ್ತಷ್ಟು ಸುದ್ದಿಗಳು

vertical

Latest News

ಭಾರೀ ಮಳೆಗೆ ಸಾರಡ್ಕದಲ್ಲಿ ಗುಡ್ಡ ಕುಸಿತ: ಕರ್ನಾಟಕ ಕೇರಳ ಸಂಚಾರ ಕ್ಕೆ ಅಡ್ಡಿ

newsics.com ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಭಾರೀ ಮಳೆಯಿಂದ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪದ ಸಾರಡ್ಕದಲ್ಲಿ ಗುಡ್ಡ  ಕುಸಿತ ಸಂಭವಿಸಿದೆ. ರಸ್ತೆಗೆ ಮಣ್ಣಿನ ರಾಶಿ...

ಪರಪ್ಪನ ಅಗ್ರಹಾರ ಜೈಲಿನ ಮುಖ್ಯ ಅಧಿಕಾರಿ ರಂಗನಾಥ್ ವರ್ಗಾ

newsics.com ಬೆಂಗಳೂರು: ಅಕ್ರಮಗಳ ಅಡ್ಡೆ ಎಂಬ ಕುಖ್ಯಾತಿಗೆ ಒಳಗಾಗಿರುವ ಪರಪ್ಪನ ಅಗ್ರಹಾರ ಜೈಲಿನ ಮುಖ್ಯ ಅಧಿಕಾರಿ ರಂಗನಾಥ್ ಅವರನ್ನು ವರ್ಗಾ ಮಾಡಲಾಗಿದೆ. ರಂಗನಾಥ್ ವಿರುದ್ಧ ಹಲವು ಆರೋಪಗಳು ಕೇಳಿ ಬಂದಿದ್ದವು. ಇದೀಗ ಕಲಬುರ್ಗಿ ಜೈಲಿಗೆ  ವರ್ಗಾಯಿಸಲಾಗಿದೆ. ಶಿವಮೊಗ್ಗದ...

ಸಿಎಂ ಕೇಜ್ರಿವಾಲ್ ನಿವಾಸದ ಮೇಲೆ ದಾಳಿ ಪ್ರಕರಣ: ಸಂಸದ ತೇಜಸ್ವಿ ಸೂರ್ಯ ವಿಚಾರಣೆ

newsics.com ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ನಿವಾಸದ ಮೇಲೆ ದಾಳಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸತ್ ಸದಸ್ಯ ತೇಜಸ್ವಿ ಸೂರ್ಯ ಅವರನ್ನು ದೆಹಲಿ ಪೊಲೀಸರು ವಿಚಾರಣೆಗೆ ಗುರಿಪಡಿಸಿದ್ದಾರೆ. ದೆಹಲಿಯ ಅಶೋಕ್ ರಸ್ತೆಯಲ್ಲಿರುವ ಸಂಸದ ತೇಜಸ್ವಿ...
- Advertisement -
error: Content is protected !!