newsics.com
ಕಾರವಾರ: ಕುಮಟಾ ಸಮೀಪದ ಹಂದಿಗೋಣದಲ್ಲಿ ಶನಿವಾರ ಬೆಳಗ್ಗೆ ಅಡುಗೆ ಅನಿಲವಿದ್ದ ಟ್ಯಾಂಕರ್ ಪಲ್ಟಿಯಾಗಿದೆ. ರಾಷ್ಟ್ರೀಯ ಹೆದ್ದಾರಿ 66ಕ್ಕೆ ಅಡ್ಡವಾಗಿ ಬಿದ್ದಿದ್ದು, ಅನಿಲ ಸೋರಿಕೆಯಾಗುತ್ತಿದೆ.
ಟ್ಯಾಂಕರ್ ಬಿದ್ದ ಸ್ಥಳದಿಂದ ಎರಡೂ ಕಡೆ ಅರ್ಧ ಕಿಲೋಮೀಟರ್ ದೂರದವರೆಗೆ ವಾಹನ ಸಂಚಾರ ತಡೆಹಿಡಿಯಲಾಗಿದೆ. ಹೆದ್ದಾರಿಯ ಎರಡೂ ಕಡೆಗಳಲ್ಲಿ ಸುಮಾರು ನಾಲ್ಕು ಕಿಲೋಮೀಟರ್ ದೂರದವರೆಗೂ ವಾಹನಗಳು ಸಾಲುಗಟ್ಟಿ ನಿಂತಿವೆ.
ಈ ಟ್ಯಾಂಕರ್ ಮಂಗಳೂರಿನ ಎಂ.ಆರ್.ಪಿ.ಎಲ್.ನಿಂದ ಬರುತ್ತಿತ್ತು. ಟ್ಯಾಂಕರ್ ನ ಚಾಲಕ ಬ್ರೇಕ್ ಹಾಕಿದಾಗ ನಿಯಂತ್ರಣ ತಪ್ಪಿ ಪಲ್ಟಿಯಾಯಿತು ಎಂದು ತಿಳಿದುಬಂದಿದೆ. ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಸಮೀಪದ ಮನೆಗಳಲ್ಲಿ ವಿದ್ಯುತ್ ಉಪಕರಣಗಳನ್ನು ಬಳಕೆ ಮಾಡದಂತೆ ಮತ್ತು ಬೆಂಕಿ ಹಚ್ಚದಂತೆ ಪೊಲೀಸರು ಧ್ವನಿವರ್ಧಕದಲ್ಲಿ ಸೂಚನೆ ನೀಡುತ್ತಿದ್ದಾರೆ.
ನಟ ಶರಣ್ ಅಸ್ವಸ್ಥ; ಆಸ್ಪತ್ರೆಗೆ ದಾಖಲು
ಕರಾವಳಿಯಲ್ಲಿ ಮಾದಕ ಜಾಲ: ಆ್ಯಂಕರ್ ಅನುಶ್ರೀ ವಿಚಾರಣೆ ಮುಕ್ತಾಯ