newsics.com
ನವದೆಹಲಿ: ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿಗೆ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ .
ಸಚಿವ ಸುರೇಶ್ ಅಂಗಡಿ ಈ ವಿಚಾರವನ್ನು ಖಚಿತಪಡಿಸಿದ್ದು, ಟ್ವೀಟ್ ಮಾಡಿದ್ದಾರೆ.
ನಾನು ಕೊವೀಡ್-19 ಪರೀಕ್ಷೆಗೆ ಒಳಗಾಗಿದ್ದೇನೆ. ವರದಿ ಪಾಸಿಟಿವ್ ಎಂದು ಬಂದಿದೆ. ಹೀಗಾಗಿ ಯಾವುದೇ ರೋಗ ಲಕ್ಷಣಗಳಿಲ್ಲದೇ ಇದ್ದರೂ ನಾನು ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ. ಇತ್ತೀಚಿಗೆ ನನ್ನ ಸಂಪರ್ಕಕ್ಕೆ ಬಂದವರು ಕೊವೀಡ್-೧೯ ಪರೀಕ್ಷೆಗೆ ಒಳಗಾಗಿ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಎಂದಿದ್ದಾರೆ.
ಕೇಂದ್ರ ಸಚಿವ ಸುರೇಶ್ ಅಂಗಡಿಗೆ ಕೊರೋನಾ
Follow Us