Monday, April 12, 2021

ರಾಜ್ಯದಲ್ಲಿ 204 ಮಂದಿಗೆ ಸೋಂಕು, ಮೂವರು ಬಲಿ

♦ ಕಡೂರಿನ SSLC ವಿದ್ಯಾರ್ಥಿಗೂ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಗುರುವಾರ ಚಿಕ್ಕಮಗಳೂರು ಕಡೂರಿನ ಎಸ್ಎಸ್ಎಲ್ಸಿ ವಿದ್ಯಾರ್ಥಿ ಸೇರಿದಂತೆ 204 ಜನರಿಗೆ ಕೊರೋನಾ ಸೋಂಕು ದೃಢವಾಗಿದ್ದು, ಮಹಾಮಾರಿಗೆ ಮೂವರು ಬಲಿಯಾಗಿದ್ದಾರೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 6245ಕ್ಕೆ ಏರಿಕೆಯಾಗಿದೆ.
ಯಾದಗಿರಿ 66, ರಾಯಚೂರು 15, ಬೀದರ್ 14, ಬೆಂಗಳೂರು ನಗರ 12, ಶಿವಮೊಗ್ಗ 10, ದಾವಣಗೆರೆ 9, ಬಾಗಲಕೋಟೆ 3, ಉತ್ತರ ಕನ್ನಡ 3, ವಿಜಯಪುರ4, ಕೋಲಾರ 6, ಮೈಸೂರು 5, ದಕ್ಷಿಣ ಕನ್ನಡ 2, ಧಾರವಾಡ 2, ಹಾಸನದಲ್ಲಿ ಇಬ್ಬರಿಗೆ ಸೋಂಕು ತಗುಲಿದೆ. ರಾಜ್ಯದಲ್ಲಿ ಮೂವರು ಬಲಿಯಾಗಿದ್ದು, ಈವರೆಗೆ 72 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಒಟ್ಟು 3195 ಸಕ್ರಿಯ ಪ್ರಕರಣಗಳಿದ್ದು, 14 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!