ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರ ಮಿತಿಮೀರಿದೆ. ಸೋಂಕಿತರ ಸಂಖ್ಯೆ ಗಣನೀಯವಾಗಿ ಏರುತ್ತಿದೆ. ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 1 ಲಕ್ಷ ದಾಟಿದೆ.
ಬೆಂಗಳೂರಿನಲ್ಲಿ ದಿನೇದಿನೇ ಸೋಂಕಿತರ ಸಂಖ್ಯೆ ಏರುತ್ತಲೇ ಇದೆ. ಈ ಮಧ್ಯೆ, ಬಳ್ಳಾರಿ, ಕಲಬುರಗಿ ಜಿಲ್ಲೆಗಳಲ್ಲೂ ಕೊರೋನಾ ಸ್ಫೋಟ ಸಂಭವಿಸಿದೆ. ಸೋಮವಾರ ರಾಜ್ಯದಲ್ಲಿ 5324 ಹೊಸ ಸೋಂಕಿತರು ಪತ್ತೆಯಾಗಿದ್ದು, ಒಂದೇ ದಿನ ಬಳ್ಳಾರಿಯಲ್ಲಿ 840, ಕಲಬುರಗಿಯಲ್ಲಿ 631 ಮಂದಿಗೆ ಸೋಂಕು ಪತ್ತೆಯಾಗಿದೆ. ಈ ಮೂಲಕ ಹಳ್ಳಿಗಳಲ್ಲೂ ಸೋಂಕು ಹೆಚ್ಚಿನ ಪ್ರಮಾಣದಲ್ಲಿ ಹರಡುತ್ತಿದೆ.
ಮೊದಲು ಸೋಂಕು ಪತ್ತೆಯಾದ ಕೇವಲ 4 ತಿಂಗಳಲ್ಲೇ ಲಕ್ಷ ತಲುಪಿದ್ದು, ತಜ್ಞರ ಪ್ರಕಾರ 2 ಲಕ್ಷ ತಲುಪಲು ಇನ್ನು ಕೇವಲ 15 ರಿಂದ 20 ದಿನ ಸಾಕಾಗಲಿದೆ.
ವಿಶ್ವದ ಅತಿ ದೊಡ್ಡ ಕೋವಿಡ್ ಲಸಿಕೆ ಅಧ್ಯಯನ ಆರಂಭ
ರಾಜ್ಯದಲ್ಲಿ ಸಾವಿನ ಸಂಖ್ಯೆ ಸಹ 2 ಸಾವಿರದ ಸನಿಹ ತಲುಪಿದೆ. ಇಂದು 75 ಸೋಂಕಿತರು ಸಾವನ್ನಪ್ಪಿದ್ದು, ಒಟ್ಟು ಸಾವಿನ ಸಂಖ್ಯೆ 1953ಕ್ಕೆ ಏರಿಕೆಯಾಗಿದೆ. ಸೋಂಕಿನಿಂದ ಸೋಮವಾರ 1953 ಮಂದಿ ಗುಣಮುಖರಾಗಿದ್ದು, ಈವರೆಗೂ 37685 ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಈಗ 61819 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಐಸಿಯುನಲ್ಲಿ 598 ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನಡೆಯುತ್ತಿದೆ.
ಲೀಸ್’ಗೆ ಸಿಗಲಿವೆ ಮಾರುತಿ ಕಾರುಗಳು!