Tuesday, April 13, 2021

ರಾಜ್ಯದಲ್ಲಿ ಮಧ್ಯಾಹ್ನದ ತನಕ ಕೊರೋನಾಕ್ಕೆ ನಾಲ್ವರ ಬಲಿ

ಬೆಂಗಳೂರು:  ರಾಜ್ಯದಲ್ಲಿ ಮಾರಕ ಕೊರೋನಾ ಮಧ್ಯಾಹ್ನದ ತನಕ ನಾಲ್ವರ ಬಲಿಪಡೆದಿದೆ. ಕಲಬುರ್ಗಿ ಜಿಲ್ಲೆಯಲ್ಲಿ ಕೊರೋನಾದಿಂದ ಮುಖ್ಯ ಶಿಕ್ಷಕರೊಬ್ಬರು ಮೃತಪಟ್ಟಿದ್ದಾರೆ. ಇದರೊಂದಿಗೆ ಕಲಬುರ್ಗಿಯಲ್ಲಿ ಕೊರೋನಾಕ್ಕೆ ಬಲಿಯಾದವರ ಸಂಖ್ಯೆ  31ಕ್ಕೆ ಏರಿದೆ.

ಮಂಡ್ಯದಲ್ಲಿ 37 ವರ್ಷ ಪ್ರಾಯದ ವ್ಯಕ್ತಿಯೊಬ್ಬರು ಕೊರೋನಾದಿಂದ ಪ್ರಾಣ ಕಳೆದುಕೊಂಡಿದ್ದಾರೆ.  ಹಾಸನದಲ್ಲಿ 70 ವರ್ಷ ಪ್ರಾಯದ ವೃದ್ಧೆಯೊಬ್ಬರು ಕೊರೋನಾಕ್ಕೆ ಬಲಿಯಾಗಿದ್ದಾರೆ. ಬೆಂಗಳೂರಿನ ಕೊರೋನಾ ರೋಗಿಯೊಬ್ಬರು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಈ ಮಧ್ಯೆ ಕಳೆದ 20 ದಿನಗಳಿಂದ ಸೀಲ್ ಡೌನ್ ಮಾಡಲಾಗಿದ್ದ ಬೆಂಗಳೂರಿನ ಕಲಾಸಿಪಾಳ್ಯ ಪೊಲೀಸ್ ಠಾಣೆಯನ್ನು ಇಂದು ಮತ್ತೆ ತೆರೆಯಲಾಗಿದೆ. 20 ಮಂದಿ ಪೊಲೀಸರಿಗೆ ಕೊರೋನಾ ಸೋಂಕು ಕಂಡು ಬಂದ ಹಿನ್ನೆಲೆಯಲ್ಲಿ ಠಾಣೆಯನ್ನು ಸೀಲ್ ಡೌನ್ ಮಾಡಲಾಗಿತ್ತು. ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಸೇರಿದಂತೆ ಹಿರಿಯ ಅಧಿಕಾರಿಗಳು ಇಂದು ಠಾಣೆಗೆ ಭೇಟಿ ನೀಡಿ ಸಿಬ್ಬಂದಿಗೆ ಧೈರ್ಯ  ತುಂಬಿದ್ದಾರೆ.

 

ಮತ್ತಷ್ಟು ಸುದ್ದಿಗಳು

Latest News

2 ಆಂಬುಲೆನ್ಸ್’ಗೆ ದಾರಿಮಾಡಿಕೊಟ್ಟ ಪ್ರಧಾನಿ‌ ಮೋದಿ

newsics.comಕೋಲ್ಕತಾ: ಪಶ್ಚಿಮ‌ ಬಂಗಾಳ ಚುನಾವಣೆ ಪ್ರಚಾರಕ್ಕಾಗಿ ರಸ್ತೆ ಮೂಲಕ ತೆರಳುತ್ತಿದ್ದ ಪ್ರಧಾನಿ ಮೋದಿ, ದಿಢೀರ್ 2 ಆಂಬುಲೆನ್ಸ್‌ಗೆ ದಾರಿ ಮಾಡಿಕೊಟ್ಟು ಎಲ್ಲರ ಮೆಚ್ಚುಗೆಗೆ...

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50 ಸಾವಿರ ರೂ. ದಂಡ ವಿಧಿಸಿದೆ.ಉತ್ತರ ಪ್ರದೇಶದ...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...
- Advertisement -
error: Content is protected !!