ಬೆಂಗಳೂರು: ಮಾರಕ ಕೊರೋನಾ ಬೆಂಗಳೂರಿನಲ್ಲಿ ಮತ್ತೊಬ್ಬಎಎಸ್ಐ ಯನ್ನು ಬಲಿಪಡೆದುಕೊಂಡಿದೆ. ನಗರದ ಕೇಂದ್ರ ಸಶಸ್ತ್ರ ಮೀಸಲು ಪೊಲೀಸ್ ಪಡೆ (ಸಿಎಆರ್) ಯಲ್ಲಿ ಸೇವೆ ಸಲ್ಲಿಸುತ್ತಿದ್ದ ಎಎಸ್ಐ ಯೊಬ್ಬರು ಕೊರೋನಾದಿಂದ ಮೃತಪಟ್ಟಿದ್ದಾರೆ. ಕೆಲವು ದಿನಗಳ ಹಿಂದೆ ಅವರಲ್ಲಿ ಕೊರೋನಾ ಸೋಂಕಿನ ಲಕ್ಷಣ ಕಂಡು ಬಂದಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರು ಎಳೆದಿದ್ದಾರೆ.
ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ಇದುವರೆಗೆ 698 ಮಂದಿಯನ್ನು ಬಲಿಪಡೆದುಕೊಂಡಿದೆ. ಕಳೆದ ಆರು ದಿನಗಳಲ್ಲಿ 346 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ. ಕೊರೋನಾ ನಿಯಂತ್ರಿಸಲು ಹೇರಲಾಗಿರುವ ಲಾಕ್ ಡೌನ್ ಇಂದು ಕೊನೆಗೊಳ್ಳಲಿದೆ. ಸಂಜೆ ಈ ಸಂಬಂಧ ರಾಜ್ಯ ಸರ್ಕಾರ ಅಧಿಕೃತ ಹೇಳಿಕೆ ಬಿಡುಗಡೆ ಮಾಡುವ ಸಾಧ್ಯತೆಯಿದೆ