Saturday, April 17, 2021

ಬಳ್ಳಾರಿಯಲ್ಲಿ ಕೊರೋನಾಕ್ಕೆ ಮೂರನೇ ಬಲಿ

ಬಳ್ಳಾರಿ: ಮಾರಕ ಕೊರೋನಾ ಬಳ್ಳಾರಿಯಲ್ಲಿ ಮತ್ತೊಂದು ಬಲಿ ಪಡೆದುಕೊಂಡಿದೆ. ಕೊರೋನಾ ಸೋಂಕಿಗೆ ತುತ್ತಾಗಿದ್ದ 62 ವರ್ಷದ ವೃದ್ಧರೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಕೊನೆಯುಸಿರು ಎಳೆದಿದ್ದಾರೆ. ಇದು  ಬಳ್ಳಾರಿಯಲ್ಲಿ ಕೊರೋನಾ ಸಂಬಂಧಪಟ್ಟ ಮೂರನೆ ಬಲಿಯಾಗಿದೆ. ಎರಡು ದಿನಗಳ ಹಿಂದೆ ಅವರಲ್ಲಿ ಕೊರೋನಾ ಸೋಂಕಿನ ಲಕ್ಷಣ ಕಂಡು ಬಂದಿತ್ತು. ಬೆಂಗಳೂರಿನಲ್ಲಿ ಕೂಡ ಕೊರೋನಾದಿಂದ ಒರ್ವ ಮಹಿಳೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.ಆದರೆ ಇದನ್ನು ಇದುವರೆಗೆ ದೃಢೀಕರಿಸಲಾಗಿಲ್ಲ. ಈ ಮಧ್ಯೆ ರಾಜ್ಯ ಮೀಸಲು ಪೊಲೀಸ್ ಪಡೆಯ 56 ಸಿಬ್ಬಂದಿ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಇವರಲ್ಲಿ ಹೆಚ್ಚಿನವರು ಬೆಂಗಳೂರಿನಲ್ಲಿ ನಿರ್ಬಂಧಿತ ವಲಯದಲ್ಲಿ ಕರ್ತವ್ಯ  ನಿರ್ವಹಿಸಿದ್ದರು ಎಂದು ವರದಿಯಾಗಿದೆ

ಮತ್ತಷ್ಟು ಸುದ್ದಿಗಳು

Latest News

ತ್ರಿಬಲ್ ಟಿ ಸೂತ್ರ ಪಾಲನೆಗೆ ಪ್ರಧಾನಿ ಮೋದಿ ಸಲಹೆ

newsics.com ನವದೆಹಲಿ: ಇಂದಿಲ್ಲಿ (ಏ.17) ನಡೆದ ಕೊರೋನಾ ಹಿನ್ನೆಲೆಯ ಮಹತ್ವದ ಸಭೆಯ ಬಳಿಕ ಪ್ರಧಾನಿ ಮೋದಿಯವರು ತ್ರಿಬಲ್ ಟಿ ಸೂತ್ರ ಅನುಷ್ಠಾನಗೊಳಿಸುವಂತೆ ಸೂಚಿಸಿದ್ದಾರೆ. ದೇಶದಲ್ಲಿ ಅತಿಯಾಗಿ ಹೆಚ್ಚುತ್ತಿರುವ ಕೊರೋನಾ...

ಆಮ್ಲಜನಕ‌ ಕೊರತೆ: ಐಸಿಯುನಲ್ಲಿದ್ದ ಮೂವರು ಕೊರೋನಾ ಸೋಂಕಿತರು ಸಾವು

newsics.com ಲಖನೌ (ಉತ್ತರ ಪ್ರದೇಶ): ಆಮ್ಲಜನಕದ ಕೊರತೆಯಿಂದಾಗಿ ಮೂವರು ಕೋವಿಡ್ ರೋಗಿಗಳು ಶನಿವಾರ ಸಾವನ್ನಪ್ಪಿದ್ದಾರೆ. ಮೃತರು ಗೋಮ್ಟಿನಗರದ ಡಾ. ರಾಮ್ ಮನೋಹರ್ ಲೋಹಿಯಾ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಐಸಿಯುಗೆ ದಾಖಲಾಗಿದ್ದರು. ಕೋವಿಡ್ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದ್ದು,...

ಆಸ್ಪತ್ರೆಗೆ ನುಗ್ಗಿ 850 ರೆಮಿಡಿಸಿವರ್ ಇಂಜೆಕ್ಷನ್ ಕಳ್ಳತನ

newsics.com ಭೋಪಾಲ್(ಮಧ್ಯಪ್ರದೇಶ): ಇಲ್ಲಿನ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ನುಗ್ಗಿದ ದುಷ್ಕರ್ಮಿಗಳು 850 ರೆಮಿಡಿಸಿವರ್ ಇಂಜೆಕ್ಷನ್ ಗಳನ್ನು ಕಳ್ಳತನ ಮಾಡಿದ್ದಾರೆ. ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ನಡುವೆ ಕಾಳಸಂತೆಯಲ್ಲಿ ಔಷಧ ಮಾರಾಟದ ಬೇಡಿಕೆ ಕೂಡ ಹೆಚ್ಚಾಗುತ್ತಿದೆ. ಈ...
- Advertisement -
error: Content is protected !!