Monday, April 12, 2021

ಬೆಂಗಳೂರಿನಲ್ಲಿ ಕೊರೋನಾಕ್ಕೆ ಮತ್ತೆ ಮೂವರ ಬಲಿ

ಬೆಂಗಳೂರು:ಮಾರಕ ಕೊರೋನಾ ಬೆಂಗಳೂರಿನಲ್ಲಿ ಮತ್ತೆ ಮೂವರ ಬಲಿಪಡೆದುಕೊಂಡಿದೆ. ಜೆ. ಪಿ. ನಗರ,ಕತ್ರಿಗುಪ್ಪೆ ಮತ್ತು  ಶಾಮಣ್ಣ ಗಾರ್ಡ್ ನ್ ನ ತಲಾ ಒಬ್ಬರು ಮಾರಕ ಕೊರೋನಾದಿಂದ ಮೃತಪಟ್ಟಿದ್ದಾರೆ.  ಬೆಂಗಳೂರು ದಕ್ಷಿಣದಲ್ಲಿ ಈ ಎಲ್ಲ ಪ್ರಕರಣ ವರದಿಯಾಗಿದೆ. ಮಾರಕ ಕೊರೋನಾ ಬೆಂಗಳೂರು ದಕ್ಷಿಣದಲ್ಲಿ ಇದುವರೆಗೆ 16 ಮಂದಿಯನ್ನು ಬಲಿಪಡೆದುಕೊಂಡಿದೆ. ಗುರುವಾರ ಒಂದೇ ದಿನ ಬೆಂಗಳೂರಿನಲ್ಲಿ ಎಂಟು ಮಂದಿ ಕೊರೋನಾ ರೋಗಕ್ಕೆ ಬಲಿಯಾಗಿದ್ದರು. ಈ ಮಧ್ಯೆ ಹೆಚ್ಚುತ್ತಿರುವ ಕೊರೋನಾ ಸಾವಿನ ಕುರಿತು ವಿಕ್ಟೋರಿಯಾ ಆಸ್ಪತ್ರೆ ವೈದ್ಯರು ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ. ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರು ಅಂತಿಮ ಕ್ಷಣದಲ್ಲಿ ಸರ್ಕಾರಿ ಆಸ್ಪತ್ರೆಗೆ ದಾಖಲಾಗುತ್ತಿರುವುದು ಇದಕ್ಕೆ ಒಂದು ಕಾರಣ ಎಂದು ವರದಿಯಲ್ಲಿ ಪ್ರಸ್ತಾಪಿಸಲಾಗಿದೆ. ಈ ಬೆಳವಣಿಗೆ ಮಧ್ಯೆ ಖಾಸಗಿ ಆಸ್ಪತ್ರೆಗಳಲ್ಲಿ ಕೊರೋನಾ ಚಿಕಿತ್ಸೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ದರ ನಿಗದಿಪಡಿಸಿದೆ. ಗಂಟಲು ದ್ರವ ಪರೀಕ್ಷೆಗೆ 2600 ರೂಪಾಯಿ ನಿಗದಿಪಡಿಸಲಾಗಿದೆ. ಜನರಲ್ ವಾರ್ಡ್ ಗೆ ಪ್ರತಿದಿನ 5200 ರೂಪಾಯಿ ದರ ವಿಧಿಸಲು ಸೂಚಿಸಲಾಗಿದೆ

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!