Tuesday, April 13, 2021

ಬಳ್ಳಾರಿಯಲ್ಲಿ ಕೊರೋನಾಕ್ಕೆ ಮತ್ತೆ ಇಬ್ಬರ ಬಲಿ

ಬಳ್ಳಾರಿ: ಮಾರಕ ಕೊರೋನಾ ಬಳ್ಳಾರಿಯಲ್ಲಿ ಮತ್ತೆ ಇಬ್ಬರ ಬಲಿಪಡೆದಿದೆ.  ಇದರೊಂದಿಗೆ ಬಳ್ಳಾರಿಯಲ್ಲಿ ಕೊರೋನಾಕ್ಕೆ ಸತ್ತವರ ಸಂಖ್ಯೆ ಏಳಕ್ಕೆ ತಲುಪಿದೆ. ಮೃತಪಟ್ಟವರು ರಾಯದುರ್ಗ ಮತ್ತು ಸಂಡೂರು ನಿವಾಸಿಗಳಾಗಿದ್ದಾರೆ.  ಬಳ್ಳಾರಿ ಜಿಲ್ಲಾಧಿಕಾರಿ ನಕುಲ್ ಈ ಮಾಹಿತಿ ನೀಡಿದ್ದಾರೆ. ಇನ್ನೊಂದೆಡೆ ಬೆಂಗಳೂರಿನಲ್ಲಿ ಐಪಿಎಸ್ ಅಧಿಕಾರಿಯೊಬ್ಬರು ಕೂಡ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ ಎಂದು ವರದಿಯಾಗಿದೆ.  ಖಾಸಗಿ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಮೂಲಗಳು ಹೇಳಿವೆ. ಬೆಂಗಳೂರಿನಲ್ಲಿ ಮತ್ತೆ ಇಬ್ಬರು ಪೊಲೀಸರಲ್ಲಿ ಕೊರೋನಾ ದೃಢಪಟ್ಟಿದೆ. ಇದೇ ವೇಳೆ ಕೊರೋನಾ ಸೋಂಕು ಹೆಚ್ಚಾದ ಹಿನ್ನೆಲೆಯಲ್ಲಿ ಮೈಸೂರಿನ ಸುತ್ತೂರು ಮಠಕ್ಕೆ ಭಕ್ತರ ಪ್ರವೇಶವನ್ನು ನಿರ್ಬಂಧಿಸಲಾಗಿದೆ

ಮತ್ತಷ್ಟು ಸುದ್ದಿಗಳು

Latest News

ಬೆಂಗಳೂರಿನಲ್ಲಿ 5500 ಕೊರೋನಾ ಸೋಂಕು, ರಾಜ್ಯದಲ್ಲಿ 8778 ಪ್ರಕರಣ, 67 ಜನರ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಯುಗಾದಿ ದಿನದಂದು ಕೂಡ ಕೊರೋನಾ ಅಬ್ಬರ ಮುಂದುವರಿದಿದೆ. ರಾಜ್ಯದಲ್ಲಿ ಹೊಸದಾಗಿ 8778 ಮಂದಿಗೆ ಕೊರೋನಾ ಸೋಂಕು ತಗುಲಿದೆ.  ಬೆಂಗಳೂರಿನಲ್ಲಿ ಹೊಸದಾಗಿ 5500 ಕೊರೋನಾ...

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ ನಿವಾಸಿ 58 ಡಯಾಲಿಸಿಸ್'ಗೆ ಬಂದಿದ್ದ ಮಹಿಳೆಗೆ...

ಮೀನುಗಾರಿಕಾ ಬೋಟ್ ದುರಂತ: ಇಬ್ಬರ ಸಾವು, 12 ಮೀನುಗಾರರು ನಾಪತ್ತೆ

newsics.comಮಂಗಳೂರು(ದಕ್ಷಿಣ ಕನ್ನಡ): ಮೀನುಗಾರಿಕಾ ಬೋಟ್ ದುರಂತದಲ್ಲಿ  ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರು ಬಂದರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ...
- Advertisement -
error: Content is protected !!