Monday, April 12, 2021

ಕೊರೋನಾ ಮುಚ್ಚಿಟ್ಟು ಮದುವೆಯಾದವ ಐದೇ ದಿನದಲ್ಲಿ ಸಾವು!

ಕಾರವಾರ: ವಿವಾಹವಾಗುವ ಸಂಭ್ರಮದಲ್ಲಿ ಕೊರೋನಾ ಮುಚ್ಚಿಟ್ಟ ಯುವಕ ಮದುವೆಯಾದ ಐದೇ ದಿನದಲ್ಲಿ ಮೃತಪಟ್ಟಿದ್ದಾನೆ.
ಇದರಿಂದಾಗಿ ಈಗ ಆತನ ಕುಟುಂಬದವರು, ಮದುವೆಯಲ್ಲಿ ಭಾಗಿಯಾದವರೆಲ್ಲ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಓರ್ವ ಯುವಕ ಮಾಡಿದ ತಪ್ಪಿಗೆ ಇಡೀ ಕುಟುಂಬ, ಬಳಗವೇ ದೊಡ್ಡ ಸಂಕಷ್ಟದಲ್ಲಿ ಸಿಲುಕಿದೆ.
ಮದುವೆಯಾಗುವ ಸಂಭ್ರಮದಲ್ಲಿ ಕೊರೋನಾ ಮುಚ್ಚಿಟ್ಟು ಮದುವೆಯಾದ ಯುವಕ ಮೃತಪಟ್ಟ ಬೆನ್ನಲ್ಲೇ ಆತನ ವಿವಾಹ ಸಮಾರಂಭದಲ್ಲಿ ಭಾಗಿಯಾಗಿದ್ದ ಆತನ ಕುಟುಂಬಸ್ಥರಿಗೂ, ಬಂಧು ಬಳಗದವರಿಗೂ ಸೋಂಕು ಹರಡಿದೆ. ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ 26 ವರ್ಷದ ಭಟ್ಕಳದ ಯುವಕನಿಗೆ ಕೊರೋನಾ ಸೋಂಕು ತಗುಲಿತ್ತು, ಇದರಿಂದ ತನ್ನ ಮದುವೆಗೆ ಅಡ್ಡಿಯಾಗುತ್ತದೆಂದು ಭಾವಿಸಿದ ಯುವಕ ಎಲ್ಲವನ್ನೂ ಬಚ್ಚಿಟ್ಟು ಮದುವೆಯಾಗಿ ಮಂಗಳೂರಿನಲ್ಲಿರುವ ತನ್ನ ಮನೆಗೆ ಬಂದಿದ್ದಾನೆ. ಸೋಂಕಿನ ತೀವ್ರತೆ ಹೆಚ್ಚಾದ ಹಿನ್ನೆಲೆ ಐದು ದಿನದಲ್ಲೇ ಯುವಕ ಸಾವನ್ನಪ್ಪಿದ್ದಾನೆ. ಈ ಮದುವೆ ಸಮಾರಂಭದಲ್ಲಿ ಭಾಗಿಯಾದ 20 ಜನರಿಗೆ ಸೋಂಕು ಹರಡಿದೆ ಎಂದು ತಿಳಿದುಬಂದಿದೆ. ಕುಟುಂಬಸ್ಥರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವುದಾಗಿ ಪೊಲೀಸರು ಹೇಳಿದ್ದಾರೆ. ಸದ್ಯ ಭಟ್ಕಳದಲ್ಲಿ ಇದುವರೆಗೆ 93 ಕೊರೋನಾ ಸೋಂಕಿತರಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!