Thursday, December 9, 2021

ಉದ್ಯೋಗ ಕಡಿತಕ್ಕೆ ನಾಂದಿ ಹಾಡಿತೇ ಐಟಿ ವಲಯ?

Follow Us

MNCಯಿಂದ ವಜಾಗೊಂಡ ದೀಪಾ ಬರೆದ ಪತ್ರದಿಂದ ಟೆಕ್ಕಿಗಳು ಕಂಗಾಲು

ಬೆಂಗಳೂರು: ‘ಯಾರನ್ನೂ ಕೆಲಸದಿಂದ ತೆಗೆದುಹಾಕಬಾರದು’ ಎಂಬ ರಾಜ್ಯ ಕಾರ್ಮಿಕ ಇಲಾಖೆಯ ಆದೇಶವನ್ನೂ ಲೆಕ್ಕಿಸದೆ ಯುಎಸ್ ಮೂಲದ ಎಂಎನ್ ಸಿ ಕಂಪನಿಯೊಂದು ಕೊರೋನಾ ಸಂಕಷ್ಟದಲ್ಲೂ 15 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಿದೆ ಎಂದು ಕೆಲಸ ಕಳೆದುಕೊಂಡ ದೀಪಾ ರೆಡ್ಡಿ ದೂರಿದ್ದಾರೆ.
ಈ ಸಂಬಂಧ ಅಧಿಕಾರಿಗಳಿಗೆ ಪತ್ರ ಬರೆದಿರುವ ದೀಪಾ, ಲಾಕ್ಡೌನ್ ಅವಧಿಯಲ್ಲಿ ಉದ್ಯೋಗ, ಸಂಬಳವಿಲ್ಲದೆ ಹೇಗೆ ಬದುಕುವುದು ಎಂದು ಪ್ರಶ್ನಿಸಿ, ನೆರವು ಕೋರಿ ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಪಿ ಮಣಿವಣ್ಣನ್ ಅವರಿಗೆ ಟ್ಯಾಗ್ ಮಾಡಿ ಟ್ವೀಟ್ ಮಾಡಿದ್ದಾರೆ.
ವಜಾಗೊಂಡ ಟೆಕ್ಕಿ ದೀಪಾ ಬರೆದ ಪತ್ರದ ಸಾರ:
‘ಸಾಂಕ್ರಾಮಿಕ ಪಿಡುಗು ಕಾಡುತ್ತಿರುವ ಸಂದರ್ಭದಲ್ಲಿ ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸುತ್ತಿರುವ ಬಗ್ಗೆ ನಿಮ್ಮ ಗಮನಕ್ಕೆ ತರುತ್ತಿದ್ದೇನೆ. ನಾನು ಬೆಳ್ಳಂದೂರು ರಸ್ತೆ ಎಕೋಸ್ಪೇಸ್ ನಲ್ಲಿರುವ ಎಂಎನ್ ಸಿ ಕಂಪನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದೆ. ನನ್ನನ್ನೂ ಸೇರಿ 15 ಮಂದಿಯನ್ನು ಕೆಲಸದಿಂದ ವಜಾಗೊಳಿಸಲಾಗಿದೆ. ಸಾಂಕ್ರಾಮಿಕ ಪಿಡುಗು ಇರುವ ಸಂದರ್ಭದಲ್ಲಿ ಅನುಸರಿಸಬೇಕಾದ ಅಗತ್ಯ ಕ್ರಮವನ್ನು ಅನುಸರಿಸಿಲ್ಲ ಎಂದಿದ್ದಾರೆ. ಎಲ್ಲರಿಗೂ 5600 ರೂ. ನೀಡಿ ಬಿಡುಗಡೆ (ರಿಲೀವಿಂಗ್) ಪತ್ರವನ್ನೂ ನೀಡಲಾಗಿದೆ’ ಎಂದು ಪತ್ರದಲ್ಲಿ ದೀಪಾ ಹೇಳಿದ್ದಾರೆ.

 

ಮತ್ತಷ್ಟು ಸುದ್ದಿಗಳು

Latest News

ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡ: ಸಂಸದ ಸುಬ್ರಮಣಿಯನ್ ಸ್ವಾಮಿ ಶಂಕೆ, ತನಿಖೆಗೆ ಆಗ್ರಹ

newsics.com ನವದೆಹಲಿ: ಸೇನಾ ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡವಿದೆಯಾ ಎಂಬ ಸಂಶಯವನ್ನು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ವ್ಯಕ್ತಪಡಿಸಿದ್ದಾರೆ. ಇದೊಂದು ಗಂಭೀರ ದುರಂತವಾಗಿದ್ದು, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ...

ಪ್ರಧಾನಮಂತ್ರಿ ಆವಾಜ್ ಯೋಜನೆ 3 ವರ್ಷ ವಿಸ್ತರಣೆ: ಕೇಂದ್ರ ನಿರ್ಧಾರ

newsics.com ನವದೆಹಲಿ: ಮೂರು ವರ್ಷ ಕಾಲ ಪ್ರಧಾನಮಂತ್ರಿ ಆವಾಜ್‌ ಯೋಜನೆ (ಗ್ರಾಮೀಣ) ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ದೇಶದ ಗ್ರಾಮೀಣ ಪ್ರದೇಶದಲ್ಲಿ ಅರ್ಹರಿಗೆ ವಸತಿ ಕಲ್ಪಿಸುವ ಈ ಯೋಜನೆಯನ್ನು ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ. ಪ್ರಧಾನಿ...

ದೆಹಲಿಯಲ್ಲಿ ಶುಕ್ರವಾರ ರಾವತ್ ದಂಪತಿ ಅಂತ್ಯಕ್ರಿಯೆ, ಉತ್ತರಾಖಂಡದಲ್ಲಿ 3 ದಿನ ಶೋಕಾಚರಣೆ

newsics.com ನವದೆಹಲಿ: ತಮಿಳುನಾಡಿನಲ್ಲಿ ನಡೆದಿರುವ ಸೇನಾ ಹೆಲಿಕಾಪ್ಟರ್ ಪತನದಲ್ಲಿ ನಿಧನರಾಗಿರುವ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಅವರ ಅಂತ್ಯಕ್ರಿಯೆ ಶುಕ್ರವಾರ(ಡಿ.10) ನಡೆಯಲಿದೆ. ಹೆಲಿಕಾಪ್ಟರ್ ದುರಂತದಲ್ಲಿ ಸಾವಿಗೀಡಾಗಿರುವ ಮೂರು ಸೇನಾ ಪಡೆಗಳ...
- Advertisement -
error: Content is protected !!