Tuesday, April 13, 2021

ರಾಜ್ಯದಲ್ಲಿ 69 ಮಂದಿಗೆ ಕೊರೋನಾ, ಸೋಂಕಿತರ ಸಂಖ್ಯೆ 2158ಕ್ಕೇರಿಕೆ, ಓರ್ವ ಮಹಿಳೆ ಸಾವು

ಬೆಂಗಳೂರು: ರಾಜ್ಯದಲ್ಲಿ ಸೋಮವಾರ 69 ಮಂದಿಗೆ ಕೊರೋನಾ ಸೋಂಕು ತಗುಲಿದ್ದು, ಸೋಂಕಿತರ ಸಂಖ್ಯೆ 2158ಕ್ಕೆ ಏರಿಕೆಯಾಗಿದೆ. ಬೆಂಗಳೂರು ಗ್ರಾಮಾಂತರದಲ್ಲಿ ಕೋವಿಡ್-19ನಿಂದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಮೃತರ ಸಂಖ್ಯೆ 43 ಕ್ಕೇರಿದೆ.
ಈವರೆಗೂ ಹಸಿರು ವಲಯದಲ್ಲಿ ಗುರುತಿಸಿಕೊಂಡಿದ್ದ ರಾಮನಗರಕ್ಕೆ ತಮಿಳುನಾಡು ನಂಜು ತಗುಲಿದ್ದು, 2 ವರ್ಷದ ಮಗುವಿಗೆ ಸೋಂಕು ಕಾಣಿಸಿಕೊಂಡಿದೆ.
ಭಾನುವಾರ ಸಂಜೆ 5 ಗಂಟೆಯಿಂದ ಸೋಮವಾರ ಮಧ್ಯಾಹ್ನ 12 ಗಂಟೆವರೆಗೆ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ, ಉಡುಪಿ 16, ಬೆಂಗಳೂರು 6, ಮಂಡ್ಯ 2, ಬೆಳಗಾವಿ 1, ದಕ್ಷಿಣ ಕನ್ನಡ 3, ಯಾದಗಿರಿ 15, ಕೋಲಾರ 2, ತುಮಕೂರು 1, ವಿಜಯಪುರ 1, ಬೀದರ್ 1, ಕಲಬುರಗಿ 14, ಬಳ್ಳಾರಿ 3, ಧಾರವಾಡ 3, ರಾಮನಗರ 1 ಸೇರಿದಂತೆ 69 ಮಂದಿಗೆ ಸೋಂಕು ತಗುಲಿದೆ.
ಸೋಂಕಿತರಲ್ಲಿ 52 ಮಂದಿ ಮಹಾರಾಷ್ಟ್ರದಿಂದ ಹಿಂದಿರುಗಿದವರಾಗಿದ್ದು, ಮೂವರು ವಿದೇಶದಿಂದ ವಾಪಸಾದವರಾಗಿದ್ದಾರೆ. ಮತ್ತೊಬ್ಬರು ತಮಿಳುನಾಡಿನಿಂದ ಬಂದವರಾಗಿದ್ದಾರೆ. ಇವರಲ್ಲಿ 9 ಮಕ್ಕಳಲ್ಲಿ ಸೋಂಕು ಕಾಣಿಸಿಕೊಂಡಿದೆ.

ಮತ್ತಷ್ಟು ಸುದ್ದಿಗಳು

Latest News

2 ಆಂಬುಲೆನ್ಸ್’ಗೆ ದಾರಿಮಾಡಿಕೊಟ್ಟ ಪ್ರಧಾನಿ‌ ಮೋದಿ

newsics.comಕೋಲ್ಕತಾ: ಪಶ್ಚಿಮ‌ ಬಂಗಾಳ ಚುನಾವಣೆ ಪ್ರಚಾರಕ್ಕಾಗಿ ರಸ್ತೆ ಮೂಲಕ ತೆರಳುತ್ತಿದ್ದ ಪ್ರಧಾನಿ ಮೋದಿ, ದಿಢೀರ್ 2 ಆಂಬುಲೆನ್ಸ್‌ಗೆ ದಾರಿ ಮಾಡಿಕೊಟ್ಟು ಎಲ್ಲರ ಮೆಚ್ಚುಗೆಗೆ...

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50 ಸಾವಿರ ರೂ. ದಂಡ ವಿಧಿಸಿದೆ.ಉತ್ತರ ಪ್ರದೇಶದ...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...
- Advertisement -
error: Content is protected !!