Saturday, November 27, 2021

ಶನಿವಾರ ಒಂದೇ ದಿನ ನಾಲ್ವರಿಗೆ ಕೊರೋನಾ; ಸೋಂಕಿತರ ಸಂಖ್ಯೆ 19 ಕ್ಕೇರಿಕೆ

Follow Us

ಬೆಂಗಳೂರು: ಒಂದೇ ದಿನದಲ್ಲಿ ನಾಲ್ವರು ವ್ಯಕ್ತಿಗಳಿಗೆ ಕೊರೊನಾ ಸೋಂಕು ದೃಢಪಟ್ಟು19ಕ್ಕೆ ಏರಿಕೆಯಾಗಿದೆ.
ಚಿಕ್ಕಬಳ್ಳಾಪುರದಲ್ಲಿ ಶನಿವಾರ ಸುದ್ದಿಗಾರರಿಗೆ ಮಾಹಿತಿ ನೀಡಿದ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಇಂದು ರಾಜ್ಯದಲ್ಲಿ ನಾಲ್ವರಿಗೆ ಕೊರೋನಾ ವೈರಸ್ ಸೋಂಕಿರುವುದು ದೃಢಪಟ್ಟಿದೆ. ಗೌರಿಬಿದನೂರಿನ ಒಬ್ಬರಿಗೆ ಹಾಗೂ ಬೆಂಗಳೂರಿನಲ್ಲಿ ಮೂವರಿಗೆ ಕೊರೋನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿರುವುದಾಗಿ ಸ್ಪಷ್ಟ ಪಡಿಸಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಇದೀಗ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ19ಕ್ಕೆ ಏರಿಕೆಯಾಗಿದೆ.
ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ್ದಂತ ಹೆಲ್ತ್ ಬುಲೆಟಿನ್ ನಲ್ಲಿ, ಶನಿವಾರ ಒಂದೇ ದಿನ ಮೂವರಿಗೆ ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ತಗುಲಿರುವುದಾಗಿ ದೃಢಪಡಿಸಿತ್ತು. ಮತ್ತೊಂದೆಡೆ ಇದೇ ವಿಚಾರವಾಗಿ ಸಚಿವ ಡಾ.ಕೆ.ಸುಧಾಕರ್ ಮಾತನಾಡಿ, ಕೊರೊನಾ ವೈರಸ್ ಸೋಂಕಿತ ಪ್ರಕರಣಗಳು ನಾಲ್ಕು ಎಂಬುದಾಗಿ ತಿಳಿಸಿದ್ದಾರೆ. ಆರೋಗ್ಯ ಸಚಿವ ಶ್ರೀರಾಮುಲು ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಹೇಳಿಕೆಗಲ್ ನಡುವೆ ಗೊಂದಲ ಕಾಣಿಸಿಕೊಂಡಿದೆ.

ಮತ್ತಷ್ಟು ಸುದ್ದಿಗಳು

Latest News

ನಕ್ಸಲ್ ಮುಖಂಡ ಮಡ್ವಿ ಭೀಮಾ ಎನ್ ಕೌಂಟರ್

newsics.com ರಾಯ್ ಪುರ: ನಕ್ಸಲ್ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಮಡ್ವಿ ಭೀಮಾ , ಭದ್ರತಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಹತನಾಗಿದ್ದಾನೆ.  ಛತ್ತೀಸ್ ಘಡದ ಸುಕ್ಮಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಹಲವು...

ದಕ್ಷಿಣ ಆಫ್ರಿಕಾ ಕೊರೋನಾ ರೂಪಾಂತರಿಗೆ ಒಮಿಕ್ರೋನ್ ಎಂದು ನಾಮಕರಣ

newsics.com ವಾಷಿಂಗ್ಟನ್: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ರೂಪಾಂತರಿ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿದೆ. ಅತ್ಯಂತ ಪ್ರಬಲ ರೂಪಾಂತರಿಯಾಗಿರುವ ಕಾರಣ ಇದು ವೇಗವಾಗಿ ಹರಡುತ್ತಿದೆ ಎಂಬ ಭೀತಿ ಮನೆ ಮಾಡಿದೆ. ಈ ಮಧ್ಯೆ ದಕ್ಷಿಣ ಆಫ್ರಿಕಾಕ್ಕೆ ಹಲವು...

ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿದ್ದ ಪೊಲೀಸ್ ಎಸ್ಐ ಅಮಾನತು

newsics.com ವಾರಂಗಲ್(ಆಂಧ್ರಪ್ರದೇಶ): ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿರುವ ಆರೋಪದ ಮೇಲೆ ಪೊಲೀಸ್ ಎಸ್ಐ ಒಬ್ಬರನ್ನು ಅಮಾನತುಗೊಳಿಸಲಾಗಿದೆ. ವಾರಂಗಲ್‌ನ ‍ವನಪರ್ತಿ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಶೇಕ್ ಶಾಪಿ ಅಮಾನತುಗೊಂಡಿರುವ ಪೊಲೀಸ್ ಅಧಿಕಟರಿ. ನವೆಂಬರ್ 18ರಂದು ವಿವಾಹಿತೆಯ...
- Advertisement -
error: Content is protected !!