ಮಂಡ್ಯ: ಜಿಲ್ಲೆಯ ಮಳವಳ್ಳಿ ತಾಲೂಕಿನ ದಾಸನದೊಡ್ಡಿಯ ‘ಮನ್ ಕೀ ಬಾತ್’ ಕಾಮೇಗೌಡರಿಗೆ ಕೊರೋನಾ ಸೋಂಕು ತಗುಲಿದೆ.
85 ವರ್ಷ ವಯಸ್ಸಿನ ಕಾಮೇಗೌಡರು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಬಲಗಾಲಿನಲ್ಲಿ ಆಗಿದ್ದ ಗಾಯದ ಸೋಂಕಿನಿಂದ ಅವರು ಬಳಲುತ್ತಿದ್ದರು. ಮಳವಳ್ಳಿ ತಾಲ್ಲೂಕು ಆಸ್ಪತ್ರೆ, ಜಿಲ್ಲಾಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿದ್ದರು. ಆಸ್ಪತ್ರೆಗೆ ದಾಖಲಾಗಲು ನಿರಾಕರಿಸಿ ನಿತ್ಯ ಆಸ್ಪತ್ರೆಗೆ ಹೋಗಿ, ಚಿಕಿತ್ಸೆ ಪಡೆದು ಮನೆಗೆ ಮರಳುತ್ತಿದ್ದರು.
ಕಳೆದ 40 ವರ್ಷಗಳಿಂದ ಈ ಬೆಟ್ಟಕ್ಕೆ ಕಾವಲುಗಾರನಂತಿರುವ ದಾಸನದೊಡ್ಡಿಯ ಕಾಮೇಗೌಡ, ಬೆಟ್ಟದ ಮೇಲೆ ಕಟ್ಟೆ, ಕಾಲುವೆ, ರಸ್ತೆ ನಿರ್ಮಿಸಿದ್ದಾರೆ. ಬೆಟ್ಟದ ತಪ್ಪಲಲ್ಲಿ ಸಾವಿರಾರು ಗಿಡ ನೆಟ್ಟು ಬೆಳೆಸಿರುವ ಅವರು ಈ ಭಾಗದಲ್ಲಿ ‘ಪರಿಸರ ಸಂರಕ್ಷಕ’ ಎಂದೇ ಖ್ಯಾತಿ ಗಳಿಸಿದ್ದಾರೆ. ಕಾಮೇಗೌಡರ ಈ ಸಾಧನೆಯನ್ನು ಪ್ರಧಾನಿ ನರೇಂದ್ರ ಮೋದಿ ಮನ್ ಕೀ ಬಾತ್ ನಲ್ಲಿ ಶ್ಲಾಘಿಸಿದ್ದರು.
‘ಮನ್ ಕೀ ಬಾತ್’ ಕಾಮೇಗೌಡರಿಗೆ ಕೊರೋನಾ
Follow Us