Monday, April 12, 2021

ಮಗಳಿಂದಲೇ ಕೊರೋನಾ ಸೋಂಕಿತ ತಂದೆಯ ಅಂತ್ಯಕ್ರಿಯೆ!

ಬೆಂಗಳೂರು: ಕೊರೋನಾದಿಂದ ಸಾವನ್ನಪ್ಪಿದ ತಂದೆಯ ಚಿತೆಗೆ ಮಗಳೇ ಅಗ್ನಿಸ್ಪರ್ಶ ಮಾಡುವ ಮೂಲಕ ಅಂತ್ಯಸಂಸ್ಕಾರ ನಡೆಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ನಗರದ ಶಕ್ತಿಗಣಪತಿನಗರ ವಾರ್ಡ್ ನಿವಾಸಿ ಅಟೋ ಚಾಲಕರೊಬ್ಬರಿಗೆ ಕೊರೋನಾ ವೈರಸ್ ತಗುಲಿತ್ತು. ಅವರನ್ನು ಚಿಕಿತ್ಸೆಗಾಗಿ ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಸಾವನ್ನಪ್ಪಿದ್ದರು. ಈ ಕುರಿತಂತೆ ಅವರ ಪುತ್ರಿ ಸ್ಥಳೀಯ ಕಾಂಗ್ರೆಸ್ ನಾಯಕರಿಗೆ‌ ಮಾಹಿತಿ ನೀಡಿದ್ದರು. ಮೃತರ ಕುಟುಂಬದ ಸಹಾಯಕ್ಕೆ ಧಾವಿಸಿದ್ದು ಪುತ್ರಿಗೆ ಧೈರ್ಯ ತುಂಬಿ ಅಂತ್ಯಸಂಸ್ಕಾರಕ್ಕೆ ವ್ಯವಸ್ಥೆ ಕಲ್ಪಿಸಿದ್ದಾರೆ.
ವೈದ್ಯರು ಹಾಗೂ ಕೊರೋನಾ ವಾರಿಯರ್ಸ್‌ ಸೂಚನೆಯಂತೆ ಮೃತ ಅಟೋ ಚಾಲಕನ ಪುತ್ರಿ ಪಿಪಿಟಿ ಕಿಟ್ ಧರಿಸಿಕೊಂಡು ಸುಮನಹಳ್ಳಿಯ ಚಿತಾಗಾರದಲ್ಲಿ ಅಂತ್ಯಸಂಸ್ಕಾರ ನೆರವೇರಿಸಿದ್ದಾಳೆ. ಕಕೊರೋನಾ ರೋಗದಿಂದ ಮೃತಪಟ್ಟ ವ್ಯಕ್ತಿಯ ಅಂತ್ಯಸಂಸ್ಕಾರಕ್ಕೆ ಮಾರ್ಗಸೂಚಿಗಳಿವೆ. ಈ‌ ಮಾರ್ಗಸೂಚಿಗಳ ಅನ್ವಯ ಅಂತ್ಯಸಂಸ್ಕಾರ ನಡೆದಿದ್ದು, ಮೃತರ ಕುಟುಂಬದ ಇತರ ಸದಸ್ಯರು ಕ್ವಾರಂಟೈನ್’ನಲ್ಲಿದ್ದರೂ ಮಗಳು ಖುದ್ದು ಅಂತ್ಯಸಂಸ್ಕಾರ ನಡೆಸುವ ಮೂಲಕ ನೋವಿನಲ್ಲೂ ಕರ್ತವ್ಯಪ್ರಜ್ಞೆ ಮೆರೆದಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!