Sunday, July 3, 2022

ಬಿಮ್ಸ್ ಆಂಬುಲೆನ್ಸ್’ಗೆ ಬೆಂಕಿ ಹಚ್ಚಿದ್ದ 11 ಮಂದಿಗೆ ಕೊರೋನಾ ಸೋಂಕು

Follow Us

ಬೆಳಗಾವಿ: ನಗರದ ಬಿಮ್ಸ್ ಆಸ್ಪತ್ರೆಯಲ್ಲಿ ಆಂಬುಲೆನ್ಸ್ ಗೆ ಬೆಂಕಿ ಹಚ್ಚಿದ್ದ 14 ಆರೋಪಿಗಳ ಪೈಕಿ 11 ಮಂದಿಗೆ ಕೊರೋನಾ ಸೋಂಕು ತಗುಲಿದೆ.
ಕೊರೊನಾ ಸೋಂಕಿತ ರೋಗಿಯೊಬ್ಬರು ಚಿಕಿತ್ಸೆ ಸಿಗದೇ ಮೃತಪಟ್ಟ ಹಿನ್ನೆಲೆ ರೊಚ್ಚಿಗೆದ್ದ ಕುಟುಂಬಸ್ಥರು ಆಸ್ಪತ್ರೆ ಮುಂದೆ ಗಲಾಟೆ ನಡೆಸಿದ ಘಟನೆ ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ನಡೆದಿತ್ತು. ಐಸಿಯುನಲ್ಲಿದ್ದ ಕೊರೊನಾ ರೋಗಿ ಮೃತಪಟ್ಟ ಹಿನ್ನೆಲೆ ರೊಚ್ಚಿಗೆದ್ದ ಕುಟುಂಬಸ್ಥರು ಆಸ್ಪತ್ರೆ ಮುಂದೆ ಗಲಾಟೆ ನಡೆಸಿದ್ದರು. ಆಂಬುಲೆನ್ಸ್ ಗೆ ಬೆಂಕಿ ಹಚ್ಚಿ ಆಸ್ಪತ್ರೆ ಮುಂಭಾಗದ ಗಾಜು ಪುಡಿ ಪುಡಿ ಮಾಡಿ ಬಳಿಕ ಆಸ್ಪತ್ರೆಯ ವೈದ್ಯರ ಮೇಲೂ ಹಲ್ಲೆ ನಡೆಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಪೊಲೀಸರು 14 ಜನರನ್ನು ಬಂಧಿಸಿದ್ದರು. ಈ ಪೈಕಿ 11 ಜನರಿಗೂ ಕೊರೋನಾ ಸೋಂಕು ತಗುಲಿದೆ ಎಂದು ತಿಳಿದುಬಂದಿದೆ. ಈ ಆರೋಪಿಗಳನ್ನು ಬಂಧಿಸಿದ ಪೊಲೀಸರಿಗೂ ಕೊರೋನಾ ಸೋಂಕಿನ ಭೀತಿ ಉಂಟಾಗಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಕಲುಷಿತ ನೀರು ಸೇವನೆ; 40 ಕ್ಕೂ ಹೆಚ್ಚು ಜನ ಅಸ್ವಸ್ಥ

newsics.com ರಾಯಚೂರು; ಕಲುಷಿತ ನೀರು ಸೇವನೆ ಮಾಡಿ 40 ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡ ಘಟನೆ ರಾಯಚೂರಿನಲ್ಲಿ ನಡೆದಿದೆ. ಅನೇಕರು ವಾಂತಿ ಭೇದಿಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಲ್ಕಂದಿನ್ನಿಯ ಸರ್ಕಾರಿ...

ಅನಾರೋಗ್ಯ ನೆಪವೊಡ್ಡಿ ಏರ್ ಇಂಡಿಯಾ ಸಂದರ್ಶನಕ್ಕೆ ಹಾಜರಾದ ಇಂಡಿಗೋ ಸಿಬ್ಬಂದಿ, ವಿಮಾನ ಸೇವೆ ವ್ಯತ್ಯಯ

newsics.com ನವದೆಹಲಿ: ಏರ್ ಇಂಡಿಗೋ ಸಿಬ್ಬಂದಿ ಅನಾರೋಗ್ಯದ ನೆಪವೊಡ್ಡಿ ಶನಿವಾರ ಏರ್ ಇಂಡಿಯಾ‌ ಸಂದರ್ಶನಕ್ಕೆ ತೆರಳಿದ್ದರಿಂದ ಇಂಡಿಗೋ ಸೇವೆಯಲ್ಲಿ‌ ವ್ಯತ್ಯಯ ಉಂಟಾಗಿತ್ತು. ವಿಮಾನಯಾನ ವ್ಯತ್ಯಯ ಉಂಟಾಗಿದ್ದಕ್ಕೆ ಇಂಡಿಗೋ ಬಳಿ ಕಾರಣ ಕೇಳಲಾಗಿದೆ ಎಂದು ನಾಗರಿಕ ವಿಮಾನಯಾನ...

ಬೆಂಗಳೂರಿನಲ್ಲಿ 746 ಮಂದಿ ಸೇರಿ ರಾಜ್ಯದಲ್ಲಿ 826 ಜನಕ್ಕೆ ಕೊರೋನಾ ಸೋಂಕು

newsics.com ಬೆಂಗಳೂರು ; ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಇಂದು ಒಟ್ಟು 826 ಕೊರೊನಾ ಪ್ರಕರಣ ವರದಿಯಾಗಿದೆ.ಸಕ್ರಿಯ ಪ್ರಕರಣಗಳ ಸಂಖ್ಯೆ 6,666ಕ್ಕೆ ಏರಿಕೆ ಕಂಡಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,72,285ಕ್ಕೆ ಏರಿಕೆಯಾಗಿದೆ. ಇಂದು ಯಾವುದೇ ಸಾವು...
- Advertisement -
error: Content is protected !!