ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ಸೋಂಕಿನ ಅಟ್ಟಹಾಸ ಮುಂದುವರೆದಿದ್ದು, ಆರೋಗ್ಯಾಧಿಕಾರಿ ಕುಟುಂಬದ ಮೂವರು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.
ನಗರದ ಬೊಮ್ಮನಹಳ್ಳಿ ಆರೋಗ್ಯಾಧಿಕಾರಿ ತಂದೆ, ತಾಯಿ ಹಾಗೂ ಮಾವ ಕಿಲ್ಲರ್ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. ಕೊರೋನಾ ವೈರಸ್ ಲಕ್ಷಣಗಳು ಕಂಡುಬಂದಿದ್ದು ಖಾಸಗಿ ಆಸ್ಪತ್ರೆಗಳಲ್ಲಿ ಸೂಕ್ತ ಚಿಕಿತ್ಸೆ ಸಿಗದ ಹಿನ್ನೆಲೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರಿನಲ್ಲಿ ಒಂದೇ ದಿನ 2207 ಜನರಿಗೆ ಕೊರೋನಾ ಸೋಂಕು ತಗುಲಿದ್ದು, ಸದ್ಯ ಬೆಂಗಳೂರಿನಲ್ಲಿ 29091 ಕೊರೋನಾ ಪಾಸಿಟಿವ್ ಸಕ್ರಿಯ ಪ್ರಕರಣಗಳಿವೆ.
ಕಿಮ್ಸ್’ನಲ್ಲಿ ಪ್ಲಾಸ್ಮಾ ಚಿಕಿತ್ಸೆ; ಎಲ್ಲಾ 13 ಸೋಂಕಿತರು ಗುಣಮುಖ