Saturday, April 17, 2021

ತಿಂಗಳೊಳಗೆ ಎಲ್ಲ ಮೆಡಿಕಲ್ ಕಾಲೇಜು, 2 ಇಎಸ್‌ಐ ಆಸ್ಪತ್ರೆಗಳಲ್ಲಿ ಕೊರೋನಾ ಲ್ಯಾಬ್

ಬೆಂಗಳೂರು: ತಿಂಗಳೊಳಗೆ ರಾಜ್ಯದ ಎಲ್ಲ ಖಾಸಗಿ ವೈದ್ಯಕೀಯ ಕಾಲೇಜುಗಳು ಮತ್ತು 2 ಇಎಸ್‌ಐ ಆಸ್ಪತ್ರೆಗಳಲ್ಲಿ ಕೊವಿಡ್-19 ಲ್ಯಾಬ್ ತೆರೆಯಲು ಸರ್ಕಾರ ಆದೇಶ ನೀಡಿದೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ಕೊವಿಡ್-19 ಕುರಿತ ವಿಡಿಯೋ ಕಾನ್ಫರೆನ್ಸ್ ಮೂಲಕ ಸುದ್ದಿಗೋಷ್ಠಿ ನಡೆಸಿದ ಅವರು, ಮೆಡಿಕಲ್ ಕಾಲೇಜುಗಳು ಹಾಗೂ ಇ‌ಎಸ್‌ಐಸಿ ಆಸ್ಪತ್ರೆಗಳಲ್ಲಿ ಕಡ್ಡಾಯವಾಗಿ ಕೋವಿಡ್ ಪರೀಕ್ಷಾರ್ಥವಾದ ಆರ್’ಟಿಪಿಸಿಆರ್ ಲ್ಯಾಬ್ ಗಳನ್ನು ಪ್ರಾರಂಭಿಸಲು ಸರ್ಕಾರ ಅಧಿಸೂಚನೆ ಹೊರಡಿಸಿದೆ ಎಂದು ಹೇಳಿದರು.
ರಾಜ್ಯದಲ್ಲಿ ಒಟ್ಟು 651 ಕೊರೋನಾ ಪ್ರಕರಣಗಳು ವರದಿಯಾಗಿದ್ದು, ಒಟ್ಟಾರೆ 27 ಜನ ಸಾವನ್ನಪ್ಪಿದ್ದಾರೆ. 321 ಜನ ಗುಣಮುಖರಾಗಿದ್ದಾರೆ. 300 ಜನರನ್ನು ಆಸ್ಪತ್ರೆಗಳಲ್ಲಿ ಪ್ರತ್ಯೇಕಿಸಲಾಗಿದೆ. ಮೂವರನ್ನು ತೀವ್ರ ನಿಗಾ ಘಟಕಗಳಲ್ಲಿರಿಸಲಾಗಿದೆ. ರಾಜ್ಯಾದ್ಯಂತ ಒಟ್ಟು 25,684 ವ್ಯಕ್ತಿಗಳನ್ನು ನಿಗಾವಣೆಯಲ್ಲಿ ಇಡಲಾಗಿದೆ. ಇಲ್ಲಿಯವರೆಗೆ ರಾಜ್ಯದಲ್ಲಿ ಪರೀಕ್ಷಿಸಲಾಗಿರುವ 79,193 ಮಾದರಿಗಳ ಪೈಕಿ 651 ಮಾದರಿಗಳು ಖಚಿತಗೊಂಡಿವೆ. ಸೋಮವಾರ 4,295 ಮಾದರಿಗಳನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದರು.

ಮತ್ತಷ್ಟು ಸುದ್ದಿಗಳು

Latest News

ಪ್ರಧಾನಿ ಮೋದಿ ಮನವಿ: ಕುಂಭಮೇಳ ಅಂತ್ಯ

newsics.com ಹರಿದ್ವಾರ: ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಿದ ಹಿನ್ನೆಲೆಯಲ್ಲಿ ಹರಿದ್ವಾರದ ಕುಂಭಮೇಳವನ್ನು ಮೊಟಕುಗೊಳಿಸಲಾಗಿದೆ. ಈ ಕುರಿತು ಜುನಾ ಅಖಾಡದ ಸ್ವಾಮಿ ಅವಧೇಶಾನಂದ ಗಿರಿ ಅವರು ಶನಿವಾರ (ಏ.17)...

ಬೆಂಗಳೂರಿನಲ್ಲಿ 11, 404 ಕೊರೋನಾ ಸೋಂಕು, ರಾಜ್ಯದಲ್ಲಿ 17489 ಪ್ರಕರಣ, 80 ಜನರ ಸಾವು

newsics.com ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರಿಸುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ  ರಾಜ್ಯದಲ್ಲಿ ಹೊಸದಾಗಿ  17,489  ಮಂದಿಗೆ ಸೋಂಕು ತಗುಲಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ  11,41,998  ಕ್ಕೆ ತಲುಪಿದೆ. ಬೆಂಗಳೂರಿನಲ್ಲಿ ಹೊಸದಾಗಿ 11,...

ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿ ಹೊರಟ ಯುವತಿಗೆ ದಂಡ

newsics.com ಲಂಡನ್: ಜನರು ಲಾಕ್ ಡೌನ್ ವೇಳೆ ಮನೆಯಲ್ಲಿ ಇರಬೇಕು ಎಂದು ಪೊಲೀಸರು ಸೂಚಿಸುತ್ತಾರೆ. ಆದರೆ ಲಂಡನ್ ನಲ್ಲಿ ಯುವತಿಯೊಬ್ಬಳು ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿಕೊಂಡು ಹೋಗಿದ್ದಳು. ಈ ಸಾಹಸಕ್ಕೆ ಹೋದ ಯುವತಿ...
- Advertisement -
error: Content is protected !!