Monday, April 12, 2021

ಪಕ್ಕದ ಮನೆಗೆ ಕೊರೋನಾ; ಐಸೋಲೇಷನ್’ಗೆ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಪಕ್ಕದ‌ ಮನೆಯ ಸದಸ್ಯರಿಗೆ ಕೊರೋನಾ ಸೋಂಕು ಕಾಣಿಸಿಕೊಂಡ ಹಿನ್ನೆಲೆ ಶಾಸಕ ಪ್ರಿಯಾಂಕ್ ಖರ್ಗೆ ಸ್ವಯಂ ಹೋಂ ಕ್ವಾರಂಟೈನ್ ಗೆ ಒಳಗಾಗಿದ್ದು ತಮ್ಮ ಭೇಟಿಗೆ ಯಾರೂ ಬರದಂತೆ ಮನವಿ‌ ಮಾಡಿದ್ದಾರೆ.
ಮಾಜಿ ಸಚಿವ ಹಾಗೂ ಶಾಸಕ ಪ್ರಿಯಾಂಕ್ ಖರ್ಗೆ ಬೆಂಗಳೂರು ನಿವಾಸದ ಪಕ್ಕದ ಮನೆಯ ಸದಸ್ಯರಲ್ಲಿ ಕೊರೋನಾ ಸೋಂಕು ಕಾಣಿಸಿಕೊಂಡಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಪ್ರಿಯಾಂಕ್ ಖರ್ಗೆ ಭಾನುವಾರದಿಂದ ಹೋಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ. ಈ ಬಗ್ಗೆ ಪೇಸ್ ಬುಕ್‌ನಲ್ಲಿ ಪೋಸ್ಟ್ ಹಾಕಿರುವ ಪ್ರಿಯಾಂಕ್ ಖರ್ಗೆ, ನಾನು ಆರೋಗ್ಯವಾಗಿಯೇ ಇದ್ದೇನೆ. ಪಕ್ಕದ ಮನೆಯಲ್ಲಿ ಕೊರೋನಾ ಸೋಂಕು ಕಾಣಿಸಿರುವುದರಿಂದ ತಮ್ಮ ಭೇಟಿಗೆ ಯಾರೂ ಮನೆಯ ಬಳಿ ಬರಬೇಡಿ.‌ ಬದಲಾಗಿ ಯಾವುದೇ ತುರ್ತು ವಿಚಾರವಿದ್ದರೆ ದೂರವಾಣಿ ಕರೆ ಮಾಡಿ ಎಂದು ಮನವಿ ‌ಮಾಡಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!