Saturday, April 17, 2021

ಮೈಸೂರಿನಲ್ಲಿ 13 ಪೊಲೀಸರಿಗೆ ಕೊರೋನಾ ಸೋಂಕು

ಮೈಸೂರು: ಬೆಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸಿ ಮೈಸೂರಿಗೆ ಹಿಂತಿರುಗಿದ್ದ ರಾಜ್ಯ ಮೀಸಲು ಪೊಲೀಸ್ ಪಡೆಯ 13 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ಇದರಿಂದಾಗಿ ಮೈಸೂರು ಪೊಲೀಸರಲ್ಲಿ ಆತಂಕ ಸೃಷ್ಟಿಯಾಗಿದೆ. ಸೋಂಕು ಪತ್ತೆಯಾದ ಎಲ್ಲ ಪೊಲೀಸರನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಎಲ್ಲ ಪೊಲೀಸ್ ಸಿಬ್ಬಂದಿ ಮೈಸೂರಿನ ಪೊಲೀಸ್ ವಸತಿ ಗೃಹದಲ್ಲಿ ವಾಸವಾಗಿದ್ದರು. ಇಂದು ವಸತಿ ಗೃಹಕ್ಕೆ ಭೇಟಿ ನೀಡಿದ ಪೊಲೀಸ್ ಆಯುಕ್ತ ಚಂದ್ರಗುಪ್ತ ಎಲ್ಲರಿಗೂ ಧೈರ್ಯ ತುಂಬಿದರು. ಬೆಂಗಳೂರಿನಲ್ಲಿ ಕೂಡ ಪರಿಸ್ಥಿತಿ ಭಿನ್ನವಾಗಿಲ್ಲ. ಎಎಸ್ಐ ಯೊಬ್ಬರು ಕೊರೋನಾಕ್ಕೆ ಈಗಾಗಲೇ ಬಲಿಯಾಗಿದ್ದಾರೆ.  ವಿವಿಧ ಠಾಣೆಗಳಲ್ಲಿನ 30ಕ್ಕೂ ಹೆಚ್ಚು ಮಂದಿಯಲ್ಲಿ ಕೊರೋನಾ ಸೋಂಕು ಈಗಾಗಲೇ ದೃಢಪಟ್ಟಿದೆ.

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!