ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವ ಪ್ರಕರಣ ವರದಿಯಾಗಿದೆ. ಕಳೆದ 24 ಗಂಟೆ ಅವಧಿಯಲ್ಲಿ 35 ಪೊಲೀಸರು ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಇದು ಆತಂಕ ಮೂಡಿಸಿದೆ.
ಒಟ್ಟು 951 ಪೊಲೀಸರಿಗೆ ಬೆಂಗಳೂರಿನಲ್ಲಿ ಕೊರೋನಾ ಸೋಂಕು ತಗುಲಿದೆ. 807 ಪೊಲೀಸರು ಕ್ವಾರಂಟೈನ್ ನಲ್ಲಿದ್ದಾರೆ. ಕೊರೋನಾಕ್ಕೆ ಇದುವರೆಗೆ 9 ಪೊಲೀಸ್ ಸಿಬ್ಬಂದಿ ಬಲಿಯಾಗಿದ್ದಾರೆ.
ಇನ್ನೊಂದೆಡೆ ಬೆಂಗಳೂರಿನ ಕೆ ಸಿ ಜನರಲ್ ಆಸ್ಪತ್ರೆಯಲ್ಲಿ ಕೊರೋನಾದಿಂದ ಮೃತಪಟ್ಟ ಮಹಿಳೆಯ ಸಂಬಂಧಿಕರು ಕರ್ತವ್ಯದಲ್ಲಿದ್ದ ವೈದ್ಯರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಕೋವಿಡ್ ಪ್ರಮಾಣಪತ್ರ ನೀಡಲು ವಿಳಂಬವಾದದ್ದೇ ಈ ಹಲ್ಲೆಗೆ ಕಾರಣ ಎಂದು ಆರೋಪಿಸಲಾಗಿದೆ