Sunday, July 3, 2022

ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದ 22 ಮಂದಿಗೆ ಕೊರೋನಾ, ಇಡೀ ಗ್ರಾಮ ಸೀಲ್ ಡೌನ್

Follow Us

ಕೋಲಾರ: ಮಹಿಳೆಯೊಬ್ಬರ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಂಡಿದ್ದ 22 ಜನರಿಗೆ ಮಂಗಳವಾರ ಕೊರೋನಾ ಸೋಂಕು ತಗುಲಿದೆ.
ಈ ಹಿನ್ನೆಲೆಯಲ್ಲಿ ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ದೊಡ್ಡಪೊನ್ನಾಂಡಹಳ್ಳಿ ಗ್ರಾಮಸ್ಥರಲ್ಲಿ ಆತಂಕ ಶುರುವಾಗಿದೆ. ಈಗ ಈ ಗ್ರಾಮವನ್ನು ಸೀಲ್ ಡೌನ್ ಮಾಡಲಾಗಿದೆ.
ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಈಚೆಗೆ ಸಾವನ್ನಪ್ಪಿದ್ದರು. ಮಹಿಳೆಯ ಅಂತ್ಯಸಂಸ್ಕಾರವು ಇದೇ ಜು.12 ರಂದು ನಡೆದಿದ್ದು, ಅಂತ್ಯಸಂಸ್ಕಾರದಲ್ಲಿ ಸುಮಾರು 50 ಮಂದಿ ಭಾಗಿಯಾಗಿದ್ದರು.
ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದ 50 ಜನರ ಗಂಟಲು ದ್ರವವನ್ನು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗಿತ್ತು. ಅಂತ್ಯಸಂಸ್ಕಾರದಲ್ಲಿ ಪಾಲ್ಗೊಂಡಿದ್ದ 22 ಜನರರಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ.ಹೀಗಾಗಿ ಜಿಲ್ಲೆಯ ದೊಡ್ಡಪೊನ್ನಾಂಡಹಳ್ಳಿ ಗ್ರಾಮವನ್ನು ಸಂಪೂರ್ಣ ಸೀಲ್ ಡೌನ್ ಮಾಡಲಾಗಿದೆ. ಜತೆಗೆ ಗ್ರಾಮದಲ್ಲಿ ರ‍್ಯಾಪಿಡ್ ಟೆಸ್ಟ್ ನಡೆಸಲು ನಿರ್ಧರಿಸಲಾಗಿದೆ. ಎಲ್ಲ 22 ಸೋಂಕಿತರನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಕಲುಷಿತ ನೀರು ಸೇವನೆ; 40 ಕ್ಕೂ ಹೆಚ್ಚು ಜನ ಅಸ್ವಸ್ಥ

newsics.com ರಾಯಚೂರು; ಕಲುಷಿತ ನೀರು ಸೇವನೆ ಮಾಡಿ 40 ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡ ಘಟನೆ ರಾಯಚೂರಿನಲ್ಲಿ ನಡೆದಿದೆ. ಅನೇಕರು ವಾಂತಿ ಭೇದಿಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಲ್ಕಂದಿನ್ನಿಯ ಸರ್ಕಾರಿ...

ಅನಾರೋಗ್ಯ ನೆಪವೊಡ್ಡಿ ಏರ್ ಇಂಡಿಯಾ ಸಂದರ್ಶನಕ್ಕೆ ಹಾಜರಾದ ಇಂಡಿಗೋ ಸಿಬ್ಬಂದಿ, ವಿಮಾನ ಸೇವೆ ವ್ಯತ್ಯಯ

newsics.com ನವದೆಹಲಿ: ಏರ್ ಇಂಡಿಗೋ ಸಿಬ್ಬಂದಿ ಅನಾರೋಗ್ಯದ ನೆಪವೊಡ್ಡಿ ಶನಿವಾರ ಏರ್ ಇಂಡಿಯಾ‌ ಸಂದರ್ಶನಕ್ಕೆ ತೆರಳಿದ್ದರಿಂದ ಇಂಡಿಗೋ ಸೇವೆಯಲ್ಲಿ‌ ವ್ಯತ್ಯಯ ಉಂಟಾಗಿತ್ತು. ವಿಮಾನಯಾನ ವ್ಯತ್ಯಯ ಉಂಟಾಗಿದ್ದಕ್ಕೆ ಇಂಡಿಗೋ ಬಳಿ ಕಾರಣ ಕೇಳಲಾಗಿದೆ ಎಂದು ನಾಗರಿಕ ವಿಮಾನಯಾನ...

ಬೆಂಗಳೂರಿನಲ್ಲಿ 746 ಮಂದಿ ಸೇರಿ ರಾಜ್ಯದಲ್ಲಿ 826 ಜನಕ್ಕೆ ಕೊರೋನಾ ಸೋಂಕು

newsics.com ಬೆಂಗಳೂರು ; ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಇಂದು ಒಟ್ಟು 826 ಕೊರೊನಾ ಪ್ರಕರಣ ವರದಿಯಾಗಿದೆ.ಸಕ್ರಿಯ ಪ್ರಕರಣಗಳ ಸಂಖ್ಯೆ 6,666ಕ್ಕೆ ಏರಿಕೆ ಕಂಡಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,72,285ಕ್ಕೆ ಏರಿಕೆಯಾಗಿದೆ. ಇಂದು ಯಾವುದೇ ಸಾವು...
- Advertisement -
error: Content is protected !!