newsics.com
ಬೆಂಗಳೂರು: ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಕೆ.ಗೋಪಾಲಯ್ಯ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.
ನನ್ನ ಕೊರೋನಾ ಪರೀಕ್ಷೆಯಲ್ಲಿ ಪಾಸಿಟಿವ್ ಎಂದು ವರದಿ ಬಂದಿರುವ ಹಿನ್ನೆಲೆಯಲ್ಲಿ ರೋಗ ಲಕ್ಷಣಗಳಿಲ್ಲದಿದ್ದರೂ ವೈದ್ಯರ ಸಲಹೆಯಂತೆ ಮಂಗಳವಾರ ಮಧ್ಯಾಹ್ನ 4 ಗಂಟೆಗೆ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದೇನೆ ಎಂದು ಸಚಿವ ಗೋಪಾಲಯ್ಯ ತಿಳಿಸಿದ್ದಾರೆ.
ಕಳೆದ ಕೆಲವು ದಿನಗಳಿಂದ ನನ್ನ ಜತೆ ಸಂಪರ್ಕದಲ್ಲಿದ್ದವರು ಕೊರೋನಾ ಪರೀಕ್ಷೆ ಮಾಡಿಸಿಕೊಳ್ಳಬೇಕೆಂದು ಹಾಗೂ ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಸಚಿವ ಗೋಪಾಲಯ್ಯ ತಿಳಿಸಿದ್ದಾರೆ.
ಸಚಿವ ಗೋಪಾಲಯ್ಯಗೆ ಕೊರೋನಾ
Follow Us