Tuesday, April 13, 2021

ಕುರಿಗಾಹಿಗೆ ಕೊರೋನಾ; 40 ಕುರಿಗಳಿಗೆ ಕ್ವಾರಂಟೈನ್!

ತುಮಕೂರು: ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಗೋಡೆಕೆರೆ ಗೊಲ್ಲರಹಟ್ಟಿ ಗ್ರಾಮದ ಕುರಿ ಮೇಯಿಸುತ್ತಿದ್ದ ವ್ಯಕ್ತಿಗೆ ಕೊರೋನಾ ಸೋಂಕು ದೃಢಪತ್ತಿದೆ. ಈ ಹಿನ್ನೆಲೆಯಲ್ಲಿ 40 ಕುರಿಗಳನ್ನು ಕ್ವಾರಂಟೈನ್ ಮಾಡಲಾಗಿದೆ.
ಈ ಕುರಿಗಲ್ ಅರೋಗ್ಯ ತಪಾಸಣೆ ನಡೆಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಸೂಚನೆ ನೀಡಿದ್ದಾರೆ.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಕೋವಿಡ್ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಸಚಿವರು, ಕುರಿಗಾಹಿಗೆ ಕೊರೋನಾ ವೈರಸ್ ದೃಢಪಟ್ಟಿದ್ದು, ಆತನ 40 ಕುರಿಗಳನ್ನು ಪ್ರತ್ಯೇಕವಾಗಿರಿಸಿ ಅವುಗಳ ಗಂಟಲು ದ್ರವ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಿ ತಪಾಸಣೆ ಮಾಡಬೇಕು ಎಂದು ನಿರ್ದೇಶಿಸಿದ್ದಾರೆ.
ತುಮಕೂರು ಜಿಲ್ಲೆಯಲ್ಲಿ ಕೊರೋನಾ ವೈರಸ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕಂಟೈನ್ಮೆಂಟ್ ವಲಯದಲ್ಲಿರುವ ಪ್ರತಿಯೊಬ್ಬರಿಗೂ ಕೋವಿಡ್ ತಪಾಸಣೆ ನಡೆಸಬೇಕು ಎಂದು ಸೂಚನೆ ನೀಡಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಕುರಾನ್’ನಲ್ಲಿನ 26 ವಚನ ತೆಗೆಯಬೇಕೆಂಬ ಅರ್ಜಿ ವಜಾಗೊಳಿಸಿದ ಸುಪ್ರೀಂ

newsics.comನವದೆಹಲಿ: ಕುರಾನ್‌ನಲ್ಲಿನ 26 ವಚನಗಳನ್ನು ತೆಗೆಯುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.ಅರ್ಜಿಯು ಗಂಭೀರ ಉದ್ದೇಶ ಹೊಂದಿಲ್ಲ ಎಂಬ ಕಾರಣಕ್ಕೆ ಅರ್ಜಿದಾರರಿಗೆ 50...

ದೋಣಿ ಮುಳುಗಿ 34 ವಲಸಿಗರ ಸಾವು

newsics.comಜಿಬೂಟಿ: ವಲಸಿಗರನ್ನು ಹೊತ್ತ ದೋಣಿಯೊಂದು ಸಮುದ್ರದಲ್ಲಿ ಮುಳುಗಿ 34 ಮಂದಿ ಮೃತಪಟ್ಟಿದ್ದಾರೆ.ಆಫ್ರಿಕಾ ಖಂಡದ ಜಿಬೂಟಿ ದೇಶದ ಕರಾವಳಿಗೆ ಹೊಂದಿಕೊಂಡ ಪ್ರದೇಶದಲ್ಲಿ ಈ ದುರಂತ ಸಂಭವಿಸಿದೆ ಎಂದು ಅಂತಾರಾಷ್ಟ್ರೀಯ ವಲಸಿಗರ ಸಂಘಟನೆ...

ಮಹಾರಾಷ್ಟ್ರದಲ್ಲಿ 51,751 ಮಂದಿಗೆ ಕೊರೋನಾ ಸೋಂಕು 258 ಜನ‌ ಸಾವು

newsics.comಮುಂಬೈ: ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಯಲ್ಲಿ 51,751 ಮಂದಿಗೆ ಕೊರೋನಾ ಸೋಂಕು ತಗುಲಿದ್ದು, 258 ಮಂದಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.ಪ್ರಯೋಗಾಲಯಕ್ಕೆ ಬಂದಿದ್ದ 2,33,22,393 ಸ್ಯಾಂಪಲ್‌ಗಳ ಪೈಕಿ 34,58,996 ಮಂದಿಗೆ ಕೊರೋನಾ...
- Advertisement -
error: Content is protected !!