ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ಅವರ ಮಗ, ಶಾಸಕ ಡಾ.ಯತೀಂದ್ರ ಅವರಿಗೂ ಕೊರೋನಾ ಸೋಂಕು ತಗುಲಿದೆ.
ಈ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಮಗ ಡಾ.ಯತೀಂದ್ರ ಅವರಿಬ್ಬರಿಗೂ ಕೊರೋನಾ ಸೋಂಕು ತಗುಲಿದೆ. ಕಳೆದ ಮೂರು ದಿನಗಳ ಹಿಂದಷ್ಟೇ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿತ್ತು.
ಈ ಬಗ್ಗೆ ಟ್ವಿಟ್ ಮಾಡಿರುವ ವರುಣಾ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಯತೀಂದ್ರ, ನನ್ನ ಕೊರೋನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದ್ದು, ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್’ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಕೋರುತ್ತೇನೆ ಎಂದಿದ್ದಾರೆ. ಸೋಂಕು ದೃಢಪಟ್ಟ ಹಿನ್ನಲೆಯಲ್ಲಿ ಶಾಸಕ ಡಾ.ಯತೀಂದ್ರ ಅವರು ಸದ್ಯದಲ್ಲಿಯೇ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರಗೂ ಕೊರೋನಾ
Follow Us