Monday, October 2, 2023

ರಾಜ್ಯದಲ್ಲಿ 1,632 ಮಂದಿಗೆ ಸೋಂಕು, 1, 612 ಜನ ಗುಣಮುಖ, 25 ಸಾವು

Follow Us

newsics.com
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಇಂದು (ಆ.14) ತುಸು ಇಳಿಕೆಯಾಗಿದೆ. ಕಳೆದ 24ಗಂಟೆಗಳಲ್ಲಿ 1,632 ಮಂದಿಗೆ ಸೋಂಕು ದೃಢಪಟ್ಟಿದ್ದು, 25 ಜನ ಕೊರೋನಾ ಸೋಂಕಿರು ಮೃತಪಟ್ಟಿದ್ದಾರೆ.

ಈ ಮೂಲಕ ರಾಜ್ಯದಲ್ಲಿ ಈವರೆಗೆ ಒಟ್ಟು 29,28,033 ಮಂದಿಗೆ ಸೋಂಕು ದೃಢಪಟ್ಟಿದೆ. ಮಾರಕ ಕೊರೋನಾಕ್ಕೆ ಈವರೆಗೆ ಒಟ್ಟು 36,958 ಜನ ಉಸಿರು ಚೆಲ್ಲಿದ್ದಾರೆ.

ರಾಜ್ಯದಲ್ಲಿ ಪಾಸಿಟಿವಿಟಿ ಪ್ರಮಾಣ ಶೇ. 1.04 ಕ್ಕೆ ತಲುಪಿದೆ.
ಕಳೆದ 24 ಗಂಟೆಯಲ್ಲಿ 1,612 ಮಂದಿ ಸೋಂಕಿತರು ಗುಣಮುಖರಾಗದ್ದು, ಚೇತರಿಸಿಕೊಂಡವರ ಸಂಖ್ಯೆ 28,65,381ಕ್ಕೆ ತಲುಪಿದೆ.
ಒಟ್ಟು 22,698 ಸಕ್ರಿಯ ಪ್ರಕರಣಗಳಿದ್ದು, ಸಾವಿನ ಪ್ರಮಾಣ ಶೇ. 1.53ರಷ್ಟಿದೆ.

ಬೆಂಗಳೂರಿನಲ್ಲಿ ಇಂದು ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. 377 ಮಂದಿಗೆ ಸೋಂಕು ತಗುಲಿದ್ದು, ಒಬ್ಬರು ಸಾವನ್ನಪ್ಪಿದ್ದಾರೆ. ಇನ್ನು ದಕ್ಷಿಣ ಕನ್ನಡದಲ್ಲೂ ಸೋಂಕು ಏರಿಕೆಯಾಗಿದ್ದು, 411 ಜನ ಸೋಂಕಿತರು ಪತ್ತೆಯಾಗಿದ್ದಾರೆ. ಉಳಿದಂತೆ ಉಡುಪಿ 169, ಹಾಸನ 97 ಮೈಸೂರು 112 ಮಂದಿಗೆ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

 

ಕೊರೋನಾ ಸೋಂಕು ಹೆಚ್ಚಿರುವ ಜಿಲ್ಲೆಗಳಲ್ಲಿ ಶಾಲೆ ಆರಂಭ ಇಲ್ಲ: ಸಿಎಂ ಬೊಮ್ಮಾಯಿ

ರಾಜ್ಯದಲ್ಲಿ ಸದ್ಯಕ್ಕೆ ಲಾಕ್ ಡೌನ್, ವೀಕೆಂಡ್ ಕರ್ಫ್ಯೂ ಇಲ್ಲ

ಮತ್ತಷ್ಟು ಸುದ್ದಿಗಳು

vertical

Latest News

ಸಾಮೂಹಿಕ ಪ್ರಾರ್ಥನೆ ವೇಳೆ ಚರ್ಚ್ ಛಾವಣಿ ಕುಸಿತ: 9 ಮಂದಿ ಸಾವು, 50 ಜನರಿಗೆ ಗಾಯ

newsics.com ಸಿಯುಡಾಡ್ ಮಡೆರೊ(ಮೆಕ್ಸಿಕೋ ಸಿಟಿ): ಭಾನುವಾರದ ಸಾಮೂಹಿಕ ಪ್ರಾರ್ಥನೆಯ ಸಮಯದಲ್ಲಿ ಚರ್ಚ್‌ನ ಛಾವಣಿ ಕುಸಿದು 9 ಜನರು ಸಾವನ್ನಪ್ಪಿದ್ದು, ಸುಮಾರು 50 ಜನರು ಗಾಯಗೊಂಡಿದ್ದಾರೆ. ಸುಮಾರು...

ವಿಮಾನದಲ್ಲಿ ಉಸಿರಾಟ ಸ್ಥಗಿತವಾಗಿದ್ದ ಮಗುವಿಗೆ ಮರುಜೀವ ನೀಡಿದ ವೈದ್ಯ, ಐಎಎಸ್ ಅಧಿಕಾರಿ!

newsics.com ನವದೆಹಲಿ: ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಮಗುವಿಗೆ ವಿಮಾನದಲ್ಲಿ ಪ್ರಯಾಣಿಸುವ ವೇಳೆ ತೀವ್ರ ಉಸಿರಾಟದ ಸಮಸ್ಯೆ ಕಾಣಿಸಿಕೊಂಡು, ವಿಮಾನದಲ್ಲಿದ್ದ ಐಎಎಸ್ ಅಧಿಕಾರಿ ಹಾಗೂ ವೈದ್ಯರೊಬ್ಬರು ಚಿಕಿತ್ಸೆ ನೀಡಿ ಮರುಜೀವ ನೀಡಿದ ಘಟನೆ ರಾಂಚಿ-ದೆಹಲಿ...

ಸ್ಥಿರಾಸ್ತಿಗಳ ಪರಿಷ್ಕೃತ ಮಾರ್ಗಸೂಚಿ ದರ ಅ.1 ರಿಂದ ಜಾರಿ!

newsics.com ಬೆಂಗಳೂರು: ಐದು ವರ್ಷಗಳ ಬಳಿಕ ರಾಜ್ಯದಲ್ಲಿ ಸ್ಥಿರಾಸ್ತಿಗಳ ಮಾರ್ಗಸೂಚಿ ದರಗಳನ್ನು ಪರಿಷ್ಕರಿಸಲಾಗಿದೆ. ಸ್ಥಿರಾಸ್ತಿಗಳ ಪರಿಷ್ಕೃತ ಮಾರ್ಗಸೂಚಿ ದರ ಭಾನುವಾರದಿಂದ (ಅ.1) ಜಾರಿಯಾಗಿದೆ. ಹೊಸ ದರಗಳ ಪ್ರಕಾರ ದಸ್ತಾವೇಜುಗಳ ನೋಂದಣಿಗೆ ನೋಂದಣಿ ಮತ್ತು ಮುದ್ರಾಂಕ...
- Advertisement -
error: Content is protected !!