newsics.com
ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ (ಆ.11) 1, 826ಮಂದಿಗೆ ಕೊರೋನಾ ಸೋಂಕು ತಗುಲಿದ್ದು 33 ಜನ ಸೋಂಕಿತರು ಸಾವನ್ನಪ್ಪಿದ್ದಾರೆ.
ಈ ಮೂಲಕ ಸೋಂಕಿತರ ಸಂಖ್ಯೆ 29,22,875ಕ್ಕೆ ಏರಿದೆ. ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 36,881ಕ್ಕೆ ತಲುಪಿದೆ.
ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 1,678 ಮಂದಿ ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 28,63,117ಕ್ಕೆ ತಲುಪಿದೆ. ರಾಜ್ಯದಲ್ಲಿ ಒಟ್ಟು 22,851 ಸಕ್ರಿಯ ಪ್ರಕರಣಗಳಿವೆ.
24ಗಂಟೆಗಳಲ್ಲಿ ಬೆಂಗಳೂರಿನಲ್ಲಿ 377 ಪ್ರಕರಣ ದಾಖಲಾಗಿದೆ. 5 ಮಂದಿ ಸಾವನ್ನಪ್ಪಿದ್ದಾರೆ.
ರಾಜ್ಯದಲ್ಲಿ ಸೋಂಕು ಹರಡುವಿಕೆ ಪ್ರಮಾಣ ಶೇ.1.09ರಷ್ಟಿದೆ. ಶೇ 1.80 ಸಾವಿನ ಪ್ರಮಾಣ ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.