Monday, April 12, 2021

5 ಯುವ ವೈದ್ಯರಲ್ಲಿ ಕೊರೋನಾ ಸೋಂಕು, 30 ವೈದ್ಯ ಸಿಬ್ಬಂದಿಗೆ ಕ್ವಾರಂಟೈನ್!

ಮಂಗಳೂರು: ಮಂಗಳೂರಿನ ಐವರು ಯುವ ವೈದ್ಯರಲ್ಲಿ ಕೋವಿಡ್-19 ಸೋಂಕು ಕಾಣಿಸಿಕೊಂಡಿದ್ದು, ಆತಂಕಕ್ಕೆ ಕಾರಣವಾಗಿದೆ.
ಮಂಗಳೂರಿನ ಕೋವಿಡ್ ಆಸ್ಪತ್ರೆ, ಲೇಡಿಗೋಷನ್ ಆಸ್ಪತ್ರೆ ಹಾಗೂ ಖಾಸಗಿ ಅಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಐವರು ವೈದ್ಯರಿಗೆ ಕೋವಿಡ್-19 ಸೋಂಕು ಕಾಣಿಸಿಕೊಂಡಿರುವುದು ದೃಢವಾಗಿದೆ.
ಐವರು ವೈದ್ಯರಿಗೆ ಕೋವಿಡ್-19 ಸೋಂಕು ತಗುಲಿರುವ ಕಾರಣ 30 ವೈದ್ಯರು, ವೈದ್ಯಕೀಯ ಸಿಬ್ಬಂದಿಗಳಿಗೆ ಕ್ವಾರಂಟೈನ್ ಮಾಡಲು ಸೂಚಿಸಲಾಗಿದೆ.
ಐವರು ವೈದ್ಯರಲ್ಲಿ 28 ವರ್ಷದ ಯುವಕ, 28 ವರ್ಷದ ಇಬ್ಬರು ಯುವತಿಯರು ಮತ್ತು 27 ವರ್ಷದ ಇಬ್ಬರು ಯುವತಿಯರು ಸೋಂಕಿಗೆ ಒಳಗಾಗಿದ್ದರು. ಇವರಲ್ಲಿ ಒಬ್ಬರು ಕೋವಿಡ್ ಆಸ್ಪತ್ರೆಯಲ್ಲಿ, ಮೂವರು ಲೇಡಿಗೋಷನ್ ಹೆರಿಗೆ ಆಸ್ಪತ್ರೆ, ಒಬ್ಬರು ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದರು.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!