newsics.com
ಬೆಂಗಳೂರು: ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.
ಪ್ರಮೋದ್ ಮುತಾಲಿಕ್ ಅವರಿಗೆ ಕೊರೋನಾ ಸೋಂಕು ತಗುಲಿರುವುದು ದೃಡವಾಗಿದೆ.
ಕೊರೋನಾ ಸೋಂಕು ತಗುಲಿರುವ ಬಗ್ಗೆ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರೇ ಸ್ಪಷ್ಟಪಡಿಸಿದ್ದು, ಇತ್ತೀಚೆಗೆ ಕೊರೋನಾ ಪರೀಕ್ಷೆಗೆ ಒಳಗಾಗಿದ್ದೆ. ಪರೀಕ್ಷೆಯ ವರದಿ ಬಂದಿದ್ದು, ನನಗೂ ಕೊರೋನಾ ಪಾಸಿಟಿವ್ ಇರುವುದು ದೃಢಪಟ್ಟಿದೆ. ಹೀಗಾಗಿ ನಗರದ ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದೇನೆ. ನನ್ನ ಸಂಪರ್ಕದಲ್ಲಿದ್ದವರೆಲ್ಲರೂ ಕೊರೋನಾ ಸೋಂಕಿನ ಲಕ್ಷಣಗಳು ಕಂಡುಬಂದರೆ ತಕ್ಷಣ ಪರೀಕ್ಷೆಗೆ ಒಳಗಾಗುವಂತೆ ಮನವಿ ಮಾಡಿದ್ದಾರೆ.
ಪ್ರಮೋದ್ ಮುತಾಲಿಕ್’ಗೆ ಕೊರೋನಾ ಸೋಂಕು
Follow Us