Tuesday, April 13, 2021

ಉಡುಪಿಯ 121 ಸೇರಿ ರಾಜ್ಯದಲ್ಲಿ 378 ಮಂದಿಗೆ ಕೊರೋನಾ

ಬೆಂಗಳೂರು: ರಾಜ್ಯದಲ್ಲಿ ಶನಿವಾರ ದಾಖಲೆಯ 378 ಜನರಿಗೆ ಹೊಸದಾಗಿ ಕೊರೋನಾ ಸೋಂಕು ತಗುಲಿದೆ. ಈ ಮೂಲಕ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 5213ಕ್ಕೆ ಏರಿಕೆಯಾಗಿದೆ. ಇವರಲ್ಲಿ 1968 ಜನರು ಸಂಪೂರ್ಣವಾಗಿ ಗುಣಮುಖರಾಗುವ ಮೂಲಕ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಉಡುಪಿ-121, ಕಲಬುರ್ಗಿ – 69, ಯಾದಗಿರಿ-103, ಬೆಂಗಳೂರು ನಗರ -18, ರಾಯಚೂರು -02, ಮಂಡ್ಯ-03, ಬೆಳಗಾವಿ -05, ಬೀದರ್ -01, ಹಾಸನ-03, ವಿಜಯಪುರ-06, ದಾವಣಗೆರೆ -06, ದಕ್ಷಿಣ ಕನ್ನಡ -24, ಚಿಕ್ಕಬಳ್ಳಾಪುರ -02, ಉತ್ತರ ಕನ್ನಡ -02, ಧಾರವಾಡ -03, ಗದಗ -04, ತುಮಕೂರು -01, ಕೋಲಾರ -01, ಹಾವೇರಿ -03, ಕೊಪ್ಪಳ -01 ಕೊರೋನಾ ಸೋಂಕು ತಗಲುವ ಮೂಲಕ ಇಂದು 378 ಜನರಿಗೆ ಕೊರೋನಾ ದೃಢಪಟ್ಟಿದೆ. ರಾಜ್ಯದಲ್ಲಿ ಇದುವರೆಗೆ ಕೊರೋನಾಗೆ 59 ಜನರು ಸಾವನ್ನಪ್ಪಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ...

ಮೀನುಗಾರಿಕಾ ಬೋಟ್ ದುರಂತ: ಇಬ್ಬರ ಸಾವು, 12 ಮೀನುಗಾರರು ನಾಪತ್ತೆ

newsics.comಮಂಗಳೂರು(ದಕ್ಷಿಣ ಕನ್ನಡ): ಮೀನುಗಾರಿಕಾ ಬೋಟ್ ದುರಂತದಲ್ಲಿ  ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರು ಬಂದರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ...

ಭಾರತದಲ್ಲಿ ಈ ಬಾರಿ ಕೂಡ ಸಾಮಾನ್ಯ ಮುಂಗಾರು: ಸ್ಕೈಮೆಟ್ ಭವಿಷ್ಯ

newsics.com ಪುಣೆ: ಸತತ ಮೂರನೆ ವರ್ಷ ಕೂಡ ಭಾರತದಲ್ಲಿ  ಸಾಮಾನ್ಯ ಮುಂಗಾರು ಮಳೆ ಸುರಿಯಲಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಸ್ಕೈ ಮೆಟ್ ಭವಿಷ್ಯ ನುಡಿದಿದೆ. ಜೂನ್ ನಿಂದ ಆರಂಭವಾಗಿ ಸೆಪ್ಟೆಂಬರ್ ತಿಂಗಳಲ್ಲಿ ಕೊನೆಗೊಳ್ಳುವ ಮುಂಗಾರು...
- Advertisement -
error: Content is protected !!