Tuesday, April 13, 2021

ಮಂಗಳೂರಲ್ಲಿ ಪ್ರಮುಖ ವೈದ್ಯರುಗಳಿಗೇ ಕೊರೋನಾ! 58 ವೈದ್ಯರಿಗೆ ಕ್ವಾರಂಟೈನ್!

ಮಂಗಳೂರು: ಇಲ್ಲಿನ ಪ್ರಮುಖ ಆಸ್ಪತ್ರೆಗಳ ವೈದ್ಯರು ಕೊರೋನಾ ಸೋಂಕಿನಿಂದ ಬಳಲುತ್ತಿದ್ದಾರೆ ಎಂದು ತಿಳಿದುಬಂದಿದೆ.
ಈ ಪೈಕಿ ಹೆಸರಾಂತ ವೈದ್ಯರೂ ಸೇರಿದ್ದಾರೆ. ಮಂಗಳವಾರ ಒಂದೇ ದಿನ 10 ವೈದ್ಯರು ಕೊರೋನಾ ಸೋಂಕಿಗೆ ಒಳಗಾಗಿದ್ದಾರೆ. ಸದ್ಯ 58 ವೈದ್ಯರು ಕ್ವಾರಂಟೈನ್’ನಲ್ಲಿದ್ದಾರೆ.
ಆತಂಕದ ಸಂಗತಿಯೆಂದರೆ, ಜಿಲ್ಲೆಯ ಸರ್ಕಾರಿ ಆಸ್ಪತ್ರೆಯ ಕೊರೋನಾ ವಿಭಾಗದ ಮುಖ್ಯಸ್ಥರೂ ಸೇರಿದಂತೆ ಹಲವು ವೈದ್ಯರಿಗೆ ಸೋಂಕು ತಗುಲಿದೆ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ.
ಮಂಗಳೂರಿನ ಎ.ಜೆ. ಆಸ್ಪತ್ರೆ, ಕೆಎಂಸಿ, ಹೈಲ್ಯಾಂಡ್ ಆಸ್ಪತ್ರೆಗಳ ಪ್ರಮುಖ ವೈದ್ಯರು ಸೋಂಕಿಗೆ ಒಳಗಾಗಿದ್ದಾರೆ. ಅಷ್ಟೇ ಅಲ್ಲ, ಎ.ಜೆ. ಆಸ್ಪತ್ರೆಯ ಹಲವು ವೈದ್ಯರು ಸೋಂಕಿನಿಂದ ಬಳಲುತ್ತಿದ್ದಾರೆ ಎಂದು ಗೊತ್ತಾಗಿದೆ.
ಜಿಲ್ಲಾ ಹೆರಿಗೆ ಆಸ್ಪತ್ರೆ ಲೇಡಿ ಘೋಷನ್ ನಲ್ಲಂತೂ ಕೊರೋನಾ ಆತಂಕದಿಂದಾಗಿ ಸೇವೆಗೆ ವೈದ್ಯರೇ ಇಲ್ಲದೆ ತಾತ್ಕಾಲಿಕವಾಗಿ ಬಂದ್ ಆಗಿದೆ.

ಮತ್ತಷ್ಟು ಸುದ್ದಿಗಳು

Latest News

ಚಿಕಿತ್ಸೆ ನಿರಾಕರಿಸಿದ ಮಲ್ಯ ಆಸ್ಪತ್ರೆ, ಫುಟ್’ಪಾತ್’ನಲ್ಲೇ 8 ಗಂಟೆ ಕಳೆದ ಕೊರೋನಾ ಸೋಂಕಿತೆ

newsics.comಬೆಂಗಳೂರು: ಡಯಾಲಿಸಿಸ್‌ಗೆ ಬಂದ‌ ಮಹಿಳೆಗೆ ಕೊರೋನಾ ಸೋಂಕಿದೆ ಎಂದು ಮಲ್ಯ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿದ್ದರಿಂದ ಆ ಮಹಿಳೆ ಪುಟ್'ಪಾತ್'ನಲ್ಲೇ ಎಂಟು ಗಂಟೆ ಕಳೆದಿದ್ದಾರೆ.ಬಸವನಗುಡಿ...

ಮೀನುಗಾರಿಕಾ ಬೋಟ್ ದುರಂತ: ಇಬ್ಬರ ಸಾವು, 12 ಮೀನುಗಾರರು ನಾಪತ್ತೆ

newsics.comಮಂಗಳೂರು(ದಕ್ಷಿಣ ಕನ್ನಡ): ಮೀನುಗಾರಿಕಾ ಬೋಟ್ ದುರಂತದಲ್ಲಿ  ಇಬ್ಬರು ಸಾವನ್ನಪ್ಪಿದ್ದು, 12 ಮೀನುಗಾರರು ನಾಪತ್ತೆಯಾಗಿರುವ ಘಟನೆ ಮಂಗಳೂರು ಬಂದರಿನಲ್ಲಿ ನಡೆದಿದೆ.ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲಿ ದೂರದಲ್ಲಿ...

ಭಾರತದಲ್ಲಿ ಈ ಬಾರಿ ಕೂಡ ಸಾಮಾನ್ಯ ಮುಂಗಾರು: ಸ್ಕೈಮೆಟ್ ಭವಿಷ್ಯ

newsics.com ಪುಣೆ: ಸತತ ಮೂರನೆ ವರ್ಷ ಕೂಡ ಭಾರತದಲ್ಲಿ  ಸಾಮಾನ್ಯ ಮುಂಗಾರು ಮಳೆ ಸುರಿಯಲಿದೆ ಎಂದು ಖಾಸಗಿ ಹವಾಮಾನ ಸಂಸ್ಥೆ ಸ್ಕೈ ಮೆಟ್ ಭವಿಷ್ಯ ನುಡಿದಿದೆ. ಜೂನ್ ನಿಂದ ಆರಂಭವಾಗಿ ಸೆಪ್ಟೆಂಬರ್ ತಿಂಗಳಲ್ಲಿ ಕೊನೆಗೊಳ್ಳುವ ಮುಂಗಾರು...
- Advertisement -
error: Content is protected !!