newsics.com
ಬೆಂಗಳೂರು: ರಾಜ್ಯದಲ್ಲಿ ಇಂದು(ಡಿ.26) ಹೊಸದಾಗಿ 857 ಜನರಿಗೆ ಕೊರೋನಾ ಸೋಂಕು ಎಂದು ದೃಢಪಡುವ ಮೂಲಕ ಸೋಂಕಿತರ ಸಂಖ್ಯೆ 9,15,345ಕ್ಕೆ ಏರಿಕೆಯಾಗಿದೆ.
ರಾಜ್ಯ ಆರೋಗ್ಯ ಇಲಾಖೆ ಕೊರೋನಾ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಸೋಂಕಿತರ ಸಂಖ್ಯೆ 9,15,345ಕ್ಕೆ ಏರಿಕೆಯಾಗಿದೆ. ಇಂದು 964 ಸೋಂಕಿತರು ಸೇರಿದಂತೆ ಇದುವರೆಗೆ 8,89,881 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಸಕ್ರಿಯ ಸೋಂಕಿತರ ಸಂಖ್ಯೆ 13,394 ಆಗಿದೆ ಎಂಬುದಾಗಿ ತಿಳಿಸಿದೆ.
ಇಂದು ಬೆಂಗಳೂರು ನಗರದಲ್ಲಿ ನಾಲ್ವರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಓರ್ವ, ಕಲಬುರಗಿಯಲ್ಲಿ ಒಬ್ಬರು ಸೇರಿದಂತೆ ಒಟ್ಟು 7 ಸೋಂಕಿತರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಈ ಮೂಲಕ ಕಿಲ್ಲರ್ ಕೊರೋನಾಗೆ ಬಲಿಯಾದವರ ಸಂಖ್ಯೆ 12,051ಕ್ಕೆ ಏರಿಕೆಯಾಗಿದೆ.
ರಾಜ್ಯದ 14 ಸಚಿವರು, ಶಾಸಕರು, ಅಧಿಕಾರಿ ಸೇರಿ 120 ಮಂದಿ ಮೇಲೆ ಲಸಿಕೆ ಪ್ರಯೋಗ
ನಾಳೆ ಅಥವಾ ನಾಡಿದ್ದು ಹೊಸ ಮಾರ್ಗಸೂಚಿ ಬಿಡುಗಡೆ
ಅಹಮದಾಬಾದ್ನಲ್ಲಿ ಕೊರೋನಾ ಲಸಿಕೆಗಾಗಿ ನೋಂದಣಿ ಆರಂಭ