newsics.com
ಬೆಂಗಳೂರು: ರಾಜ್ಯದಲ್ಲಿ ಇಂದು(ಜ.22) ಹೊಸದಾಗಿ 324 ಜನರಿಗೆ ಕೊರೋನಾ ಸೋಂಕು ತಗುಲಿದೆ. ಹೀಗಾಗಿ ಸೋಂಕಿತರ ಸಂಖ್ಯೆ 9,34,576ಕ್ಕೆ ಏರಿಕೆಯಾಗಿದೆ.
ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೊರೋನಾ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಇಂದು ಬೆಂಗಳೂರು ನಗರದಲ್ಲಿ 160 ಜನರು ಸೇರಿದಂತೆ ರಾಜ್ಯಾಧ್ಯಂತ 324 ಜನರಿಗೆ ಕೊರೋನಾ ಸೋಂಕು ತಗುಲಿದೆ. ಈ ಮೂಲಕ ಸೋಂಕಿತರ ಸಂಖ್ಯೆ 9,34,576ಕ್ಕೆ ಏರಿಕೆಯಾಗಿದೆ. ಇಂದು 890 ಸೇರಿದಂತೆ ಈವರೆಗೆ 9,15,382 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಹೀಗಾಗಿ ರಾಜ್ಯದಲ್ಲಿ 6,985 ಸಕ್ರಿಯ ಸೋಂಕಿತರಿದ್ದಾರೆ.
ಇಂದು ಬೆಂಗಳೂರು ನಗರದಲ್ಲಿ ಇಬ್ಬರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಬ್ಬರು ಸೇರಿದಂತೆ ಮೂವರು ಸೋಂಕಿತರು ಸಾವನ್ನಪ್ಪಿದ್ದಾರೆ. ಇದರಿಂದಾಗಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಬಲಿಯಾದವರ ಸಂಖ್ಯೆ 12,190ಕ್ಕೆ ಏರಿಕೆಯಾಗಿದೆ.
ಹೆಚ್ಚಿನ ಮಾಹಿತಿಗಾಗಿ: 22-01-2021 HMB kannada
ರಾಜ್ಯದಲ್ಲಿ ಈವರೆಗೆ 1.38ಲಕ್ಷ ಮಂದಿಗೆ ಲಸಿಕೆ ಹಂಚಿಕೆ – ಆರೋಗ್ಯ ಸಚಿವ
86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅಧ್ಯಕ್ಷರಾಗಿ ಡಾ. ದೊಡ್ಡರಂಗೇಗೌಡ ಆಯ್ಕೆ