ನವದೆಹಲಿ: ರಾಜ್ಯ ವಿಧಾನಪರಿಷತ್ ನ ನಾಲ್ಕು ಸ್ಥಾನಗಳಿಗೆ ಅಕ್ಟೋಬರ್ 28ರಂದು ಚುನಾವಣೆ ನಡೆಯಲಿದೆ. ಕೇಂದ್ರ ಚುನಾವಣಾ ಆಯೋಗ ಚುನಾವಣಾ ದಿನಾಂಕ ಪ್ರಕಟಿಸಿದೆ.
ಪದವೀಧರರ ಕ್ಷೇತ್ರದ ಎರಡು ಮತ್ತು ಶಿಕ್ಷಕರ ಕ್ಷೇತ್ರದ ಎರಡು ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಇದರಿಂದಾಗಿ ರಾಜ್ಯದಲ್ಲಿ ಮತ್ತೊಮ್ಮೆ ರಾಜಕೀಯ ಚಟುವಟಿಕೆ ಗರಿಗೆದರಿಕೊಳ್ಳಲಿದೆ.
ಆಡಳಿತಾರೂಢ ಬಿಜೆಪಿಗೆ ಈ ಚುನಾವಣೆ ಪ್ರತಿಷ್ಟೆಯ ವಿಷಯವಾಗಿದೆ.