newsics.com
ದಾವಣಗೆರೆ: ವೃದ್ಧ ದಂಪತಿಯನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಎಲೆಬೇತೂರು ಗ್ರಾಮದಲ್ಲಿ ಈ ಕೃತ್ಯ ವರದಿಯಾಗಿದೆ.
ಮೃತಪಟ್ಟವರನ್ನು ಗುರು ಸಿದ್ದಯ್ಯ( 80) ಮತ್ತು ಅವರ ಪತ್ನಿ ಸರೋಜಮ್ಮ(75) ಎಂದು ಗುರುತಿಸಲಾಗಿದೆ. ದಂಪತಿಗೆ ಮೂವರು ಹೆಣ್ಣು ಮಕ್ಕಳಿದ್ದು, ಎಲ್ಲರಿಗೂ ಮದುವೆಯಾಗಿ ಗಂಡನ ಮನೆಯಲಿದ್ದಾರೆ.
ಮನೆಯಲ್ಲಿ ಗುರು ಸಿದ್ದಯ್ಯ ಮತ್ತು ಅವರ ಪತ್ನಿ ಮಾತ್ರ ವಾಸಿಸುತ್ತಿದ್ದರು. ದುಷ್ಕರ್ಮಿಗಳು ತಲೆಗೆ ಹೊಡೆದು ದಂಪತಿಯನ್ನು ಹತ್ಯೆ ಮಾಡಿದ್ದಾರೆ. ದಾವಣಗೆರೆ ಗ್ರಾಮಾಂತರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.