newsics.com
ಮೈಸೂರು : ಮೈಸೂರು ಜಿಲ್ಲೆಗೆ ಭೇಟಿ ನೀಡುವ ವ್ಯಕ್ತಿಗಳು ಕೋವಿಡ್ 19 ನೆಗೆಟಿವ್ ರಿಪೋರ್ಟ್ ತರಬೇಕು ಎಂದು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೂಚಿಸಿದ್ದಾರೆ.
ಬೆಂಗಳೂರು ನಗರದಲ್ಲಿ ಕೋವಿಡ್ ವ್ಯಾಪಕವಾಗಿ ಹರಡುತ್ತಿದೆ. ಜಿಲ್ಲೆಯ ಸಾವಿರಾರು ಮಂದಿ ಪ್ರತಿದಿನ ಬೆಂಗಳೂರಿಗೆ ಭೇಟಿ ನೀಡುತ್ತಾರೆ. ಇದರ ಜತೆಗೆ ಮೈಸೂರು ಜಿಲ್ಲೆಗೆ ಬೆಂಗಳೂರಿನಿಂದ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ.
ಇದರಿಂದ ಮೈಸೂರು ಜಿಲ್ಲೆಯಾದ್ಯಂತ ಕೋವಿಡ್ ಸೋಂಕು ಹೆಚ್ಚಾಗುತ್ತಿದ್ದು, ಬೆಂಗಳೂರು ಜಿಲ್ಲೆಯಿಂದ ಮೈಸೂರು ಜಿಲ್ಲೆಗೆ ಭೇಟಿ ನೀಡುವ ವ್ಯಕ್ತಿಗಳು ಕಳೆದ 74 ಗಂಟೆಗಳ ಕೋವಿಡ್ ನೆಗೆಟಿವ್ ರಿಪೋರ್ಟ್ ತರಬೇಕು ಎಂದು ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ.
ಇದೇ ವೇಳೆ ಚಿತ್ರಮಂದಿರ ಪ್ರವೇಶಿಸಲು ಕೋವಿಡ್ ನೆಗೆಟಿವ್ ವರದಿ ಕಡ್ಡಾಯ ಎಂಬ ಜಿಲ್ಲಾಧಿಕಾರಿಗಳ ಆದೇಶಕ್ಕೆ ಚಿತ್ರ ಮಂದಿರಗಳ ಮಾಲೀಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.