Sunday, July 3, 2022

ಅಲೇಖಾನ್ ಬಳಿ ಬಿರುಕು; ಚಾರ್ಮಾಡಿ ಘಾಟ್ ಸಂಚಾರ ಮತ್ತೆ ಸ್ಥಗಿತ

Follow Us

ಬೆಳ್ತಂಗಡಿ(ದಕ್ಷಿಣ ಕನ್ನಡ): ಚಾರ್ಮಾಡಿ ಘಾಟ್’ನಲ್ಲಿ ವಾಹನ ಸಂಚಾರ ಮತ್ತೆ ಸ್ಥಗಿತವಾಗಿದೆ.
ಮಂಗಳೂರು- ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ 234 ರ ಮಧ್ಯ ಅಲೇಖಾನ್ ಸಮೀಪ ಘಾಟ್ ರಸ್ತೆ ಬಿರುಕುಬಿಟ್ಟ ಹಿನ್ನೆಲೆಯಲ್ಲಿ ಸಂಚಾರ ಸ್ಥಗಿತವಾಗಿದೆ.
ಭಾರಿ ಮಳೆಯಿಂದಾಗಿ ಚಾರ್ಮಾಡಿ ಘಾಟಿಯ ಹಲವೆಡೆ ಗುಡ್ಡ ಕುಸಿತವಾಗುತ್ತಿದೆ. ಶುಕ್ರವಾರ (ಆ.7) ಮುಂಜಾನೆ ಚಿಕ್ಕಮಗಳೂರು ವ್ಯಾಪ್ತಿಯಲ್ಲಿ ಗುಡ್ಡ ಕುಸಿದಿದ್ದರಿಂದ ಸಂಚಾರ ಸ್ಥಗಿತವಾಗಿತ್ತು. ತೆರವು ಕಾರ್ಯಚರಣೆ ಬಳಿಕ ಮತ್ತೆ ಸಂಚಾರ ಆರಂಭಗೊಂಡಿತ್ತು. ಆದರೆ, ಅಲೇಖಾನ್ ಬಿರುಕಿನಿಂದ ಮತ್ತೆ ಸಂಚಾರಕ್ಕೆ ಸಂಚಕಾರ ಬಂದೊದಗಿದೆ.

ತಲಕಾವೇರಿ ಅರ್ಚಕರ ಕುಟುಂಬ ಭೂಸಮಾಧಿ; ಶೋಧ ಕಾರ್ಯಾಚರಣೆ ಸ್ಥಗಿತ

ರಸ್ತೆಯಲ್ಲಿ ಭಾರೀ ಬಿರುಕು ಕಂಡುಬಂದ ಹಿನ್ನೆಲೆಯಲ್ಲಿ ಮುನ್ನಚ್ಚೆರಿಕೆ ಕ್ರಮವಾಗಿ ಘಾಟ್’ನಲ್ಲಿ ರಸ್ತೆ ಸಂಚಾರ ಸ್ಥಗಿತ ಮಾಡಲಾಗಿದೆ. ಚಾರ್ಮಾಡಿ ಚೆಕ್ ಪೋಸ್ಟ್, ಕೊಟ್ಟಿಗೆಹಾರ ಚೆಕ್ ಪೋಸ್ಟ್ ಬಂದ್ ಮಾಡಲಾಗಿದೆ. ವಾಹನಗಳು ಸಾಲುಗಟ್ಟಿ ನಿಂತಿದ್ದು, ರಾಷ್ಟ್ರೀಯ ಹೆದ್ದಾರಿ ಇಂಜಿನಿಯರ್ ವಿಭಾಗದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಕಲುಷಿತ ನೀರು ಸೇವನೆ; 40 ಕ್ಕೂ ಹೆಚ್ಚು ಜನ ಅಸ್ವಸ್ಥ

newsics.com ರಾಯಚೂರು; ಕಲುಷಿತ ನೀರು ಸೇವನೆ ಮಾಡಿ 40 ಕ್ಕೂ ಹೆಚ್ಚು ಜನ ಅಸ್ವಸ್ಥಗೊಂಡ ಘಟನೆ ರಾಯಚೂರಿನಲ್ಲಿ ನಡೆದಿದೆ. ಅನೇಕರು ವಾಂತಿ ಭೇದಿಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಲ್ಕಂದಿನ್ನಿಯ ಸರ್ಕಾರಿ...

ಅನಾರೋಗ್ಯ ನೆಪವೊಡ್ಡಿ ಏರ್ ಇಂಡಿಯಾ ಸಂದರ್ಶನಕ್ಕೆ ಹಾಜರಾದ ಇಂಡಿಗೋ ಸಿಬ್ಬಂದಿ, ವಿಮಾನ ಸೇವೆ ವ್ಯತ್ಯಯ

newsics.com ನವದೆಹಲಿ: ಏರ್ ಇಂಡಿಗೋ ಸಿಬ್ಬಂದಿ ಅನಾರೋಗ್ಯದ ನೆಪವೊಡ್ಡಿ ಶನಿವಾರ ಏರ್ ಇಂಡಿಯಾ‌ ಸಂದರ್ಶನಕ್ಕೆ ತೆರಳಿದ್ದರಿಂದ ಇಂಡಿಗೋ ಸೇವೆಯಲ್ಲಿ‌ ವ್ಯತ್ಯಯ ಉಂಟಾಗಿತ್ತು. ವಿಮಾನಯಾನ ವ್ಯತ್ಯಯ ಉಂಟಾಗಿದ್ದಕ್ಕೆ ಇಂಡಿಗೋ ಬಳಿ ಕಾರಣ ಕೇಳಲಾಗಿದೆ ಎಂದು ನಾಗರಿಕ ವಿಮಾನಯಾನ...

ಬೆಂಗಳೂರಿನಲ್ಲಿ 746 ಮಂದಿ ಸೇರಿ ರಾಜ್ಯದಲ್ಲಿ 826 ಜನಕ್ಕೆ ಕೊರೋನಾ ಸೋಂಕು

newsics.com ಬೆಂಗಳೂರು ; ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಇಂದು ಒಟ್ಟು 826 ಕೊರೊನಾ ಪ್ರಕರಣ ವರದಿಯಾಗಿದೆ.ಸಕ್ರಿಯ ಪ್ರಕರಣಗಳ ಸಂಖ್ಯೆ 6,666ಕ್ಕೆ ಏರಿಕೆ ಕಂಡಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,72,285ಕ್ಕೆ ಏರಿಕೆಯಾಗಿದೆ. ಇಂದು ಯಾವುದೇ ಸಾವು...
- Advertisement -
error: Content is protected !!