Friday, September 30, 2022

ಭಯದ ವಾತಾವರಣ ಸೃಷ್ಟಿಸುವುದೇ ಪ್ರವೀಣ್ ನೆಟ್ಟಾರು ಹತ್ಯೆಯ ಹಿಂದಿನ ಉದ್ದೇಶ: ಎನ್ ಐ ಎ

Follow Us

newsics.com

ನವದೆಹಲಿ:  ರಾಜ್ಯದಲ್ಲಿ ಆಕ್ರೋಶದ ಅಲೆ ಹುಟ್ಟು ಹಾಕಿದ್ದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆಯನ್ನು ಇದೀಗ ರಾಷ್ಟ್ರೀಯ ತನಿಖಾ ದಳ ಅಧಿಕೃತವಾಗಿ ಕೈಗೆತ್ತಿಕೊಂಡಿದೆ.

ರಾಜ್ಯ ಸರ್ಕಾರದ ಮನವಿ ಪುರಸ್ಕರಿಸಿ ಕೇಂದ್ರ ಗೃಹ ಇಲಾಖೆ ಪ್ರಕರಣವನ್ನು ಎನ್ ಐ ಎ ಗೆ ಹಸ್ತಾಂತರಿಸಿದೆ.

ಇದೀಗ ಹತ್ಯೆ ಕುರಿತು ಸ್ಫೋಟಕ ಮಾಹಿತಿ ಕಲೆ ಹಾಕಿರುವ ಎನ್ ಐ ಎ,  ಈ ಅಂಶಗಳನ್ನು  ಆರೋಪ ಪಟ್ಟಿಯಲ್ಲಿ  ಪ್ರಸ್ತಾಪಿಸಿದೆ.

ಭಯದ ವಾತಾವರಣ  ಸೃಷ್ಟಿಸುವುದೇ ದುಷ್ಕರ್ಮಿಗಳ ದುರುದ್ದೇಶವಾಗಿತ್ತು ಎಂದು ಹೇಳಿದೆ.

ಜುಲೈ 26ರಂದು ಅಂಗಡಿಯಿಂದ ಮನೆಗೆ ಹೋಗಲು ಸಿದ್ದತೆ ನಡೆಸುತ್ತಿದ್ದ ವೇಳೆ  ಬೈಕ್ ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಪ್ರವೀಣ್ ನೆಟ್ಟಾರು ಹತ್ಯೆ ಮಾಡಿ ಪರಾರಿಯಾಗಿದ್ದರು.

16 ದಿನಗಳ ಕಾರ್ಯಾಚರಣೆಯ ಬಳಿಕ ಪ್ರಮುಖ ಮೂರು ಆರೋಪಿಗಳನ್ನು ಬಂಧಿಸಲಾಗಿದ್ದು, ಇದೀಗ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ

ಮತ್ತಷ್ಟು ಸುದ್ದಿಗಳು

vertical

Latest News

ಉಕ್ರೇನ್‌ನ 4 ಪ್ರದೇಶಗಳು ರಷ್ಯಾ ವಶ- ಒಪ್ಪಂದಕ್ಕೆ ಸಹಿ ಹಾಕಿದ ಪುಟಿನ್‌!

newsics.com ರಷ್ಯಾ: ಉಕ್ರೇನ್‌ನ ನಾಲ್ಕು ರಾಜ್ಯಗಳನ್ನು ಅಧಿಕೃತವಾಗಿ ರಷ್ಯಾ ಸುಪರ್ದಿಗೆ ತೆಗೆದುಕೊಂಡಿದೆ. ರಷ್ಯಾ ಇಂದು ಉಕ್ರೇನ್‌ನ 4 ರಾಜ್ಯಗಳನ್ನು ತನ್ನ ಭೂಪ್ರದೇಶದಲ್ಲಿ ಸೇರಿಸಿದೆ. ಈ ಪ್ರದೇಶಗಳು ಡೊನೆಟ್ಸ್ಕ್,...

ವಂದೇ ಭಾರತ್ ಪ್ರಯಾಣ ಮಾಡಿದ್ರೆ ವಿಮಾನಕ್ಕಿಂತ ರೈಲಿಗೆ ಆದ್ಯತೆ ನೀಡುತ್ತಾರೆ: ಮೋದಿ

newsics.com ಗಾಂಧಿನಗರ: ಒಮ್ಮೆ ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಸಿದರೆ ವಿಮಾನದಲ್ಲಿ ಪ್ರಯಾಣಿಸುವುದನ್ನೇ ಜನರು ನಿಲ್ಲಿಸುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗಾಂಧಿನಗರದ ರೈಲು ನಿಲ್ದಾಣದಲ್ಲಿ ಹೊಸ ವಂದೇ ಭಾರತ್ ರೈಲಿಗೆ ಚಾಲನೆ ನೀಡಿ ಬಳಿಕ...

ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಇನ್ನಿಲ್ಲ

newsics.com ಮೈಸೂರು: ಖ್ಯಾತ ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಶುಕ್ರವಾರ ನಿಧನರಾದರು. ವೀಣೆ ಶೇಷಣ್ಣ ಅವರ ವಂಶದಲ್ಲಿ ಜನಿಸಿದ್ದ ಮೈಸೂರು ವಿ. ಸುಬ್ರಹ್ಮಣ್ಯ ಅವರು ಸಹಜವಾಗಿಯೇ ಸಂಗೀತಾಸಕ್ತಿ ಹೊಂದಿದ್ದರು. ಮೈಸೂರು ವಿ. ಸುಬ್ರಹ್ಮಣ್ಯ ಅವರ...
- Advertisement -
error: Content is protected !!