ಬೆಂಗಳೂರು: ಕೊರೋನಾ ರೋಗಿಗಳಿಗೆ ಚಿಕಿತ್ಸೆ ನೀಡಲು ನಿರಾಕರಿಸುವ ಆಸ್ಪತ್ರೆಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಎಚ್ಚರಿಕೆ ನೀಡಿದ್ದಾರೆ.
ವಿಧಾನಸೌಧದಲ್ಲಿ ಭಾನುವಾರ ಮಾಧ್ಯಮ ಗೋಷ್ಟಿಯಲ್ಲಿ ಮಾತನಾಡಿದ ಅವರು, ಚಿಕಿತ್ಸೆಗೆ ಬರುವ ರೋಗಿಗಳನ್ನು ಯಾವುದೇ ಆಸ್ಪತ್ರೆಯವರು ಚಿಕಿತ್ಸೆ ನಿರಾಕರಿಸಿ ಹಿಂದಕ್ಕೆ ಕಳುಹಿಸುವಂತಿಲ್ಲ. ಇದನ್ನು ಈಗಾಗಲೇ ಖಾಸಗಿ ಆಸ್ಪತ್ರೆ ಆಡಳಿತ ಮಂಡಳಿಗಳಿಗೆ ಸ್ಪಷ್ಟವಾಗಿ ತಿಳಿಸಲಾಗಿದೆ. ಇಷ್ಟರ ಮೇಲೂ ರೋಗಿಗಳಿಗೆ ಚಿಕಿತ್ಸೆ ನಿರಾಕರಿಸಿದರೆ ಅಂತಹ ಆಸ್ಪತ್ರೆಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕಾಗುತ್ತದೆ ಎಂದರು.
ಕೆಲ ತಪಾಸಣಾ ಕೇಂದ್ರಗಳು ಕೊರೋನಾ ಪರೀಕ್ಷೆಗೆ ನಾಲ್ಕು ಅಥವಾ ನಾಲ್ಕೂವರೆ ಸಾವಿರ ರೂ. ತೆಗೆದುಕೊಳ್ಳಲಾಗುತ್ತಿದೆ ಎಂಬ ವರದಿಗಳನ್ನು ಗಮನಿಸಿದ್ದೇನೆ. ಸರ್ಕಾರ ಇದುವರೆಗೆ ಆರು ಲಕ್ಷಕ್ಕೂ ಹೆಚ್ಚು ಮಂದಿಗೆ ಟೆಸ್ಟ್ ಮಾಡಲಾಗಿದೆ. ಸರ್ಕಾರದ ವತಿಯಿಂದ ಉಚಿತವಾಗಿ ಮಾಡಲಾಗುತ್ತಿದೆ. ಖಾಸಗಿಯವರಿಗೂ ದರ ನಿಗದಿ ಮಾಡಲಾಗಿದೆ , ನಮ್ಮಿಂದ ಕಳುಹಿಸದ ರೋಗಿಗಳಿಗೆ 2,200 ರೂ. ದರ ಪಡೆಯಬೇಕು ಎಂದು ನಿಗದಿಪಡಿಸಲಾಗಿದೆ. ಒಂದು ವೇಳೆ ಹೆಚ್ಚು ದರ ಪಡೆದರೆ ಕ್ರಮ ಕೈಗೊಳ್ಳಲಾಗುವುದು ಎಂದು ಡಾ.ಸುಧಾಕರ್ ಎಚ್ಚರಿಸಿದ್ದಾರೆ.