Wednesday, July 6, 2022

ತೋಟದ ಹಳ್ಳದಲ್ಲಿ ಸಿಲುಕಿ ಪರದಾಡಿದ ಮರಿಯಾನೆ!

Follow Us

ಮಡಿಕೇರಿ: ಮರಿಯಾನೆಯೊಂದು ತೋಟದ ನೀರು ಕೊಳ್ಳವನ್ನು ದಾಟಲಾರದೆ ಪರದಾಡಿರುವ ಘಟನೆ ಮಡಿಕೇರಿಯ ವಿರಾಜಪೇಟೆಯಲ್ಲಿ ನಡೆದಿದೆ.
ಸಾಮಾನ್ಯವಾಗಿ ಆನೆಗಳು ಹಿಂಡಿನಲ್ಲಿರುವ ಮರಿಯಾನೆಗಳ ಬಗ್ಗೆ ತೀರಾ ನಿಗಾ ವಹಿಸುತ್ತವೆ. ಆದರೂ ಕಾಡಾನೆಗಳ ಹಿಂಡಿನೊಂದಿಗಿದ್ದ ಮರಿಯಾನೆ ಹಿಂಡಿನಿಂದ ಹೇಗೆ ಬೇರಾಯಿತೋ ಗೊತ್ತಿಲ್ಲ. ಹಿಂಡಿನಲ್ಲಿ ತೋಟಕ್ಕೆ ಬಂದಿದ್ದ ಈ ಮರಿಯಾನೆ ಕೊಳ್ಳದಲ್ಲಿ ಸಿಲುಕಿ ಪರದಾಡಿದೆ.
ವಿರಾಜಪೇಟೆ ತಾಲ್ಲೂಕಿನ ಕುಟ್ಟದ ತೈಲ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪ್ರತಿದಿನ ಹತ್ತಾರು ಕಾಡಾನೆಗಳು ದಕ್ಷಿಣ ಕೊಡಗಿನ ತೋಟಗಳ ಮೂಲಕ ಹಾದು ಹೋಗುತ್ತವೆ. ಕೆಲ ಆನೆಗಳು ತೋಟದಲ್ಲೇ ಮರಿಗಳಿಗೆ ಜನ್ಮ ನೀಡುತ್ತಿವೆ. ಈ ರೀತಿ ತೋಟದಲ್ಲೇ ಜನ್ಮ ಪಡೆದ ಮರಿಯೊಂದು ಕೊಳ್ಳ ದಾಟಲಾರದೇ ಅಲ್ಲೇ ಸಿಲುಕಿಕೊಂಡಿದೆ. ವಿಷಯ ತಿಳಿದ ಸ್ಥಳೀಯರು ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಮರಿಯನ್ನು ರಕ್ಷಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಲಿಂಗಾಯಿತ ಸಂಪ್ರದಾಯದಂತೆ ಚಂದ್ರಶೇಖರ್ ಗುರೂಜಿ ಅಂತ್ಯಕ್ರಿಯೆ

newsics.com ಹುಬ್ಬಳ್ಳಿ:  ದುಷ್ಕರ್ಮಿಗಳ ದಾಳಿಯಿಂದ ಮೃತಪಟ್ಟಿರುವ ಸರಳ ವಾಸ್ತು ಖ್ಯಾತಿಯ ಚಂದ್ರ ಶೇಖರ್ ಗುರೂಜಿ ಅಂತ್ಯಕ್ರಿಯೆಗೆ ಸಿದ್ದತೆ ಮಾಡಲಾಗಿದೆ. ಲಿಂಗಾಯಿತ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಲಿದೆ. ಇಬ್ಬರು ಸ್ವಾಮೀಜಿಗಳು...

ರಷ್ಯಾ ಕ್ಷಿಪಣಿ ದಾಳಿಗೆ ಬ್ರೆಜಿಲ್ ಮಾಡೆಲ್ ಸಾವು

newsics.com ಮಾಸ್ಕೋ: ಉಕ್ರೇನ್  ವಿರುದ್ಧ ರಷ್ಯಾ ನಡೆಸುತ್ತಿರುವ ಹೋರಾಟದಲ್ಲಿ ಬ್ರೆಜಿಲ್ ನ ರೂಪದರ್ಶಿಯೊಬ್ಬರು ಮೃತಪಟ್ಟಿದ್ದಾರೆ. ಸಾವನ್ನಪ್ಪಿರುವ ರೂಪದರ್ಶಿಯನ್ನು  ಬ್ರೆಜಿಲ್ ನ  ಥಾಲಿತಾ ಡೂ ವಲ್ಲೆ ಎಂದು ಗುರುತಿಸಲಾಗಿದೆ. ಥಾಲಿತಾ  ಉಕ್ರೇನ್ ಪರವಾಗಿ ಹೋರಾಟ ಮಾಡುತ್ತಿದ್ದರು. ಬಂದೂಕು ಬಳಕೆಯಲ್ಲಿ...

ಚಾಕಲೇಟ್ ಕವರ್ ನಲ್ಲಿ ವಿದ್ಯಾರ್ಥಿಗಳಿಗೆ ಡ್ರಗ್ಸ್: ನಾಲ್ವರ ಸೆರೆ

newsics.com ಬೆಂಗಳೂರು:  ವಿದ್ಯಾರ್ಥಿಗಳಿಗೆ ಚಾಕಲೇಟ್ ಕವರ್ ನಲ್ಲಿ ಅಡಗಿಸಿ ಡ್ರಗ್ಸ್ ಪೂರೈಸುತ್ತಿದ್ದ ನಾಲ್ವರು ಆರೋಪಿಗಳನ್ನು ಬೆಂಗಳೂರಿನ  ಆವಲ ಹಳ್ಳಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು  ಮೊಹಮ್ಮದ್ ಅಸ್ಲಾಂ,  ಮೊಹಮ್ಮದ್ ನದೀಂ , ಸಚ್ಚಿಂದ್ರನ್ ಮತ್ತು...
- Advertisement -
error: Content is protected !!